ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಲಿ

31arsph1ep
Published on
  • ಅರಸೀಕೆರೆ: ಜಾವಗಲ್ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲಾಯಿತು.
    ಮುಖ್ಯ ಶಿಕ್ಷಕಿ ಪ್ರಮೀಳಾ ಮಾತನಾಡಿ, ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಉಚಿತ ಸಮವಸ್ತ್ರ, ಬಿಸಿಯೂಟ, ಶೂ, ವಿದ್ಯಾರ್ಥಿ ವೇತನ ಸೇರಿ ಎಲ್ಲ ಸವಲತ್ತುಗಳನ್ನು ನೀಡುತ್ತಿದೆ. ಇವುಗಳ ಪ್ರಯೋಜನ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
    ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕ ಸಮುದಾಯ ಒಗ್ಗೂಡಿ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉದಯ್ ಜೈನ್, ಸಹಶಿಕ್ಷಕರಾದ ಸುರೇಶ್, ಹಾಲಪ್ಪ, ಸರಸ್ವತಿ, ಧರ್ಮಪ್ಪ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net