ಮಗವಿಗೆ ತಾಯಿ ಹಾಲು ಪೂರಕ

7blk2
ಭಾಲ್ಕಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ದಿನಾಚರಣೆಯಲ್ಲಿ ಸ್ತಿçÃರೋಗ ತಜ್ಞೆ ಡಾ.ಶೈಲಜಾ ತಳವಾಡೆ ಮಾತನಾಡಿದರು. ತಾಲೂಕು ಆರೋಗ್ಯ ಅಧಿಕಾರಿ ಡಾ.ರವಿ ಕಲಶೆಟ್ಟಿ, ಶ್ರೀನಿವಾಸ ಬಿರಾದಾರ್, ಡಾ.ಅಬ್ದುಲ್ ಖಾದರ್ ಇತರರಿದ್ದರು.
Published on

ಭಾಲ್ಕಿ: ನವಜಾತ ಶಿಶು ಮತ್ತು ಚಿಕ್ಕವಯಸ್ಸಿನ ಮಕ್ಕಳ ಮರಣ ಪ್ರಮಾಣ ತಗ್ಗಿಸುವುದರ ಜತೆ ಅಪೌಷ್ಟಿಕತೆ ತಡೆಗಟ್ಟಲು ತಾಯಿ ಹಾಲು ಪೂರಕ ಎಂದು ಸ್ತಿçà ರೋಗ ತಜ್ಞೆ ಡಾ.ಶೈಲಜಾ ತಳವಾಡೆ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಭಾರತೀಯ ಕುಟುಂಬ ಕಲ್ಯಾಣ ಯೋಜನೆ ಸಂಘ ಬೀದರ್ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಶು ಜನಸಿದ ಗಂಟೆಯೊಳಗೆ ತಾಯಿ ಹಾಲು ಉಣಿಸಬೇಕು. ಹಾಲಿನಲ್ಲಿ ರೋಗ ನಿರೋಧಕ ಶಕ್ತಿ ಇರುವುದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಮಗು ಹುಟ್ಟಿದ ಆರು ತಿಂಗಳವರೆಗೆ ಕಡ್ಡಾಯವಾಗಿ ತಾಯಿ ಹಾಲು ಉಣಿಸಬೇಕು ಎಂದು ಸಲಹೆ ನೀಡಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ.ರವಿ ಕಲಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶ್ರೀನಿವಾಸ ಬಿರಾದಾರ್, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ.ಅಬ್ದುಲ್ ಖಾದರ್ ಮಾತನಾಡಿದರು.

ಕ್ಷೇತ್ರ ಶಿಕ್ಷಣ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ ಇಜಾರೆ, ರವಿ, ರಾಜು, ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಲಕ್ಷಿö್ಮÃ ಹುಡಗೆ, ಜಿಲ್ಲಾ ಮಟ್ಟದ ಕಾರ್ಯಕ್ರಮಾಧಿಕಾರಿ ವಿಶಾಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net