ಕುಣಿಗಲ್: ತಾಲೂಕಿನಲ್ಲಿ ಅಪ್ರಾಪ್ತೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಅಮೃತ್ತೂರು ಪೊಲೀಸರು ಪೋಕ್ಸೋ, ಬಾಲ್ಯವಿವಾಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 14 ವರ್ಷದ ಬಾಲಕಿಯನ್ನು ನರಸಿಂಹಮೂರ್ತಿ ಎಂಬ ವ್ಯಕ್ತಿಯೊಂದಿಗೆ ಮದುವೆ ಮಾಡಿದ್ದರು ಎನ್ನಲಾಗಿದೆ. ಈಗ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಸಿಡಿಪಿಒ ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಘಟನೆ ವಿವರ: ಗರ್ಭೀಣಿ ಅಪ್ರಾಪ್ತೆಯನ್ನು ಫೆ.24ರಂದು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮತ್ತೆ ಕರೆದುಕೊಂಡು ಹೋಗುತ್ತೇವೆ ಎಂದು ಪಾಲಕರು ಹೇಳಿದ್ದಾರೆ. ಆ ರೀತಿ ಕಳಿಸಲು ಆಗುವುದಿಲ್ಲ ಎಂದು ಆಸ್ಪತ್ರೆ ವೈದ್ಯರು ತಿಳಿಸಿದರೂ ಕರೆದುಕೊಂಡು ಹೋಗುತ್ತೇವೆ ಎಂದು ಪಟ್ಟುಹಿಡಿದಿದ್ದಾರೆ. ಈ ವೇಳೆ ಆಸ್ಪತ್ರೆ ಆಂಬುಲೆನ್ಸ್ನಲ್ಲಿ ಕಳಿಸುತ್ತೇವೆ ಎಂದರೂ ವೈದ್ಯರು ಮಾತು ಕೇಳದೆ ಪಾಲಕರು ಖಾಸಗಿ ವಾಹನದಲ್ಲಿ ಕರೆದುಕೊಂಡು ಹೋಗಿ, ಬಳಿಕ ಮೊಬೈಲ್ ಸ್ವಿಚ್ಆ್ ಮಾಡಿಕೊಂಡಿದ್ದಾರೆ. ಅನುಮಾನಗೊಂಡ ವೈದ್ಯರು ಬೆಳಗ್ಗೆ ೋನ್ ಮಾಡಿದಾಗ ಖಾಸಗಿ ಆಸ್ಪತ್ರೆಗೆ ಹೋಗಿದ್ದಾಗಿ ತಿಳಿಸಿದ್ದಾರೆ. ಫೆ.27ರಂದು ಬೆಳಗ್ಗೆ ಸುಮಾರು10 ಗಂಟೆಯಲ್ಲಿ ಮನೆಯಲ್ಲೇ ಬಾಲಕಿಗೆ ಹೆರಿಗೆಯಾಗಿದೆ. ವಿಚಾರ ತಿಳಿದ ವೈದ್ಯರು ಬಾಲಕಿ ಮತ್ತು ಮಗುವನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿಕೊಂಡಿದ್ದಾರೆ. ಈ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅಮೃತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಗ ಮಗು ಮತ್ತು ತಾಯಿ ಆಸ್ಪತ್ರೆಯಲ್ಲಿ ಇದ್ದಾರೆ.