

ಹಾಸನ: ಮಗುವಿನ ಅನಾರೋಗ್ಯದಿಂದ ಮನನೊಂದು ತಂದೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಹಿಮ್ಸ್‌ನ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಹಳೆಬೀಡು ಸಮೀಪದ ಬಸವರಾಯನಪುರ ಗ್ರಾಮದ ಗಂಗಸ್ವಾಮಿ ಎಂಬತನೆ ಆತ್ಮಹತ್ಯೆಗೆ ಯತ್ನಿಸಿದ ತಂದೆ, ತನ್ನ ಎರಡು ತಿಂಗಳ ಮಗುವಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹಿಮ್ಸ್‌ಗೆ ದಾಖಲು ಮಾಡಿದ್ದರು. ಆದರೆ ಮಗುವಿನ ಆರೋಗ್ಯ ದಿನದಿಂದ ದಿನಕ್ಕೆ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಮನನೊಂದಿದ್ದ ತಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬ ನಿರ್ಣಯಕ್ಕೆ ಬಂದು ಹಿಮ್ಸ್‌ನ ಕಟ್ಟಡದ 5ನೇ ಮಹಡಿಯ ತುದಿಯ ಮೇಲೇರಿ ಹೈಡ್ರಾಮ ಸೃಷ್ಠಿಸಿದ
ಆಗ ಆಸ್ಪತ್ರೆ ಸಿಬ್ಬಂದಿ ಗಂಗಸ್ವಾಮಿಯನ್ನು ಮನವೊಲಿಸಿ ಕೆಳಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಗಂಗಸ್ವಾಮಿಯನ್ನು ಪೊಲಿಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿಗಳು ಕರೆದೊಯ್ದಿದ್ದಾರೆ. ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.