ಮಗುವಿನೊಂದಿಗೆ ಬಾವಿಗೆ ಹಾರಿದ ತಾಯಿ

Published on

ಕಾರವಾರ: ತಾಯಿಯೊಬ್ಬಳು ತನ್ನ ಚಿಕ್ಕ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾವರದಲ್ಲಿ‌ ಸೋಮವಾರ ನಡೆದಿದೆ.

ಹೊನ್ನಾವರ ತಾಲೂಕಿನ ಜಲವಳ್ಳಿಯ ಲಲಿತಾ ಮಂಜುನಾಥ ನಾಯ್ಕ 2 ವರ್ಷದ ಮಗಳು ಮಾನಸಾಳೊಂದಿಗೆ ಆತ್ಮಹತ್ಯೆಗೆ ಶರಣಾದವಳು.

ಆಕೆ ಬಾವಿಗೆ ಹಾರಿದ ಸದ್ದು ಕೇಳುತ್ತಿದ್ದಂತೆ ಅಕ್ಲಪಕ್ಕದವರು ತಾಯಿ ಮಗಳನ್ನು ಉಳಿಸಲು ಮಾಡಿದ ಪ್ರಯತ್ನಗಳು ವಿಫಲವಾದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net