ಮಠಾಧೀಶರ ಆಶೀರ್ವಾದ ಪಡೆದ ಸೋಮಣ್ಣ

Sommanna
Published on

ಚಿತ್ರದುರ್ಗ: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಕೋಟೆನಗರಿಯ ವಿವಿಧ ಮಠಗಳಿಗೆ ಮಾಜಿ ಸಚಿವ ವಿ.ಸೋಮಣ್ಣ ಮಂಗಳವಾರ ಭೇಟಿ ನೀಡಿದ್ದರು.

ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರೊಂದಿಗೂ ಕೆಲಕಾಲ ಚರ್ಚಿಸಿದರು. ಭೋವಿ ಗುರುಪೀಠಕ್ಕೆ ಭೇಟಿ ನೀಡಿದ ವೇಳೆ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಶ್ರೀ ಮಹಾಲಿಂಗ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.

ಬಿಜೆಪಿ ಚಿತ್ರದುರ್ಗ ಜಿಲ್ಲಾಧ್ಯಕ್ಷ ಎ.ಮುರಳಿ, ತುಮಕೂರು ಜಿಲ್ಲಾಧ್ಯಕ್ಷ ಹನುಮಂತೇಗೌಡ, ತುಮಕೂರು ಭೋವಿ ಜಿಲ್ಲಾ ಸಂಘದ ಅಧ್ಯಕ್ಷ ಓಂಕಾರ, ಮುಖಂಡ ಚಂದ್ರು ಇತರರಿದ್ದರು. ಪ್ರತ್ಯೇಕವಾಗಿ ಭೇಟಿ ನೀಡಿದ್ದ ಕುವೆಂಪು ಭಾಷಾ ಪ್ರಾಧಿಕಾರದ ಸದಸ್ಯ ಕರಿಯಪ್ಪ ಮಾಳಿಗೆ ಅವರು ಮಠಾಧೀಶರ ಆಶೀರ್ವಾದ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net