ಮಠಾಧೀಶರ ನೇತೃತ್ವದಲ್ಲಿ ಚಿಂತನಾ ಸಭೆ

A think tank will be held tomorrow under the leadership of the Archbishop
ವಿಜಯಪುರದ ಹೇಮರೆಡ್ಡಿ ಮಂಗಲ ಕಾರ್ಯಾಲಯದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕರಭಂಟನಾಳದ ಗುರುಗಂಗಾಧರ ಮಠದ ಧರ್ಮಾಧಿಕಾರಿ ಶಿವಕುಮಾರ ಸ್ವಾಮೀಜಿ ಮಾತನಾಡಿದರು. ಮಠಾಧೀಶರಾದ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಚಿಮ್ಮಲಗಿಯ ಸಿದ್ದರೇಣುಕಾ ಶಿವಾಚಾರ್ಯ ಸ್ವಾಮೀಜಿ, ಶಿವಪ್ರಕಾಶ ಸ್ವಾಮೀಜಿ ಇದ್ದರು.
Published on

ವಿಜಯಪುರ: ಒಣದ್ರಾಕ್ಷಿ ಬೆಲೆ ಕುಸಿದಿದ್ದು, ಸರ್ಕಾರ ಬೆಳೆಗಾರರಿಗೆ ಬೆಂಬಲ ಬೆಲೆ ಘೋಷಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಚರ್ಚಿಸಲು ವಿವಿಧ ಮಠಾಧೀಶರು, ದ್ರಾಕ್ಷಿ ಬೆಳೆಗಾರರು, ರೈತಪರ ಸಂಘಟನೆಗಳ ನೇತೃತ್ವದಲ್ಲಿ ಆ. 5ರಂದು ನಗರದ ಹೇಮರಡ್ಡಿ ಮಂಗಲ ಕಾರ್ಯಾಲಯದಲ್ಲಿ ಚಿಂತನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಕರಭಂಟನಾಳದ ಗುರುಗಂಗಾಧರ ಮಠದ ಧರ್ಮಾಧಿಕಾರಿ ಶಿವಕುಮಾರ ಸ್ವಾಮೀಜಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ರಾಕ್ಷಿ ಬೆಳೆಗಾರರು ಪ್ರತಿ ವರ್ಷ ಒಂದಿಲ್ಲೊಂದು ಕಷ್ಟ ಅನುಭ ವಿಸುತ್ತಿದ್ದಾರೆ. ಈ ವಿಷಯವಾಗಿ ಚರ್ಚೆ ನಡೆಸಲಿದ್ದೇವೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ ಸೇರಿದಂತೆ ಉತ್ತರಕರ್ನಾಟಕ ಭಾಗದಲ್ಲಿ ದ್ರಾಕ್ಷಿ ಬೆಳೆಯುವ ರೈತರು ಸಭೆಗೆ ಬರಬಹುದು ಎಂದರು.

ಈಗಾಗಲೇ 80ಕ್ಕೂ ಹೆಚ್ಚು ಶಾಸಕರಿಗೆ, ಜಿಲ್ಲೆಯ ಸಚಿವರಿಗೆ ದ್ರಾಕ್ಷಿ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ. ಸಭೆಯಲ್ಲಿ ರೈತರ ಸಮಸ್ಯೆಗಳು, ಸಬ್ಸಿಡಿ ದರದಲ್ಲಿ ಔಷಧಿ ವಿತರಣೆ, ಮಾರುಕಟ್ಟೆ ಸಮಸ್ಯೆಗಳು, ಆನ್‌ಲೈನ ಮಾರ್ಕೆಟಿಂಗ್ ವ್ಯವಸ್ಥೆ ಕುರಿತು ಸಮಗ್ರ ಚರ್ಚೆ ನಡೆಸಲಾಗುತ್ತದೆ. ಎಲ್ಲ ರೈತರು ದ್ರಾಕ್ಷಿ ಬೆಳೆಗಾರರ ಚಿಂತನಾ ಸಭೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಮಠಾಧೀಶರಾದ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಚಿಮ್ಮಲಗಿಯ ಸಿದ್ದರೇಣುಕಾ ಶಿವಾಚಾರ್ಯ ಸ್ವಾಮೀಜಿ, ಶಿವಪ್ರಕಾಶ ಸ್ವಾಮೀಜಿ, ಸಂಗನಗೌಡ ಚಿಕ್ಕೊಂಡ, ವಿರೇಶ ಗಬ್ಬೂರ, ಅರವಿಂದ ಕುಲಕರ್ಣಿ, ಸಿದ್ದು ಮಲ್ಲಿಕಾರ್ಜುನಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net