ಮಡಿಕೇರಿ ನಗರದ ಅಭಿವೃದ್ಧಿಗಾಗಿ ಮನವಿ

prakash acharya
Published on

ಮಡಿಕೇರಿ: ಮಡಿಕೇರಿ ನಗರಸಭೆಯ ನೂತನ ಅಧ್ಯಕ್ಷೆ ಕಲಾವತಿ ಹಾಗೂ ಉಪಾಧ್ಯಕ್ಷ ಮಹೇಶ್ ಜೈನಿ ಅವರನ್ನು ಭೇಟಿಯಾದ ನಗರಸಭಾ ಮಾಜಿ ಸದಸ್ಯ ಮತ್ತು ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ನಗರದ ಅಭಿವೃದ್ಧಿಯ ದೃಷ್ಟಿಯಿಂದ ಕೆಲವು ಬೇಡಿಕೆಗಳನ್ನು ಮಂಡಿಸಿದರು.

ಮಳೆಗಾಲ ಸಮೀಪಿಸುತ್ತಿರುವುದರಿಂದ ನಗರದ ಎಲ್ಲಾ ತೋಡು ಮತ್ತು ಚರಂಡಿಗಳ ತ್ಯಾಜ್ಯವನ್ನು ವಿಲೇವಾರಿಗೊಳೀಸಬೇಕು. ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳಬೇಕು. ರಸ್ತೆಗಳ ಬದಿಯ ಕಾಡು ಕಡಿಯಬೇಕು. ರಸ್ತೆ ಅಭಿವೃದ್ಧಿಗಾಗಿ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಮಳೆಗಾಲದೊಳಗೆ ವಿನಿಯೋಗ ಮಾಡಿ ಎಲ್ಲಾ ವಾರ್ಡ್‌ಗಳ ರಸ್ತೆ ದುರಸ್ತಿ ಮಾಡಬೇಕು. ಸ್ಟೋನ್ ಹಿಲ್ ಪ್ರದೇಶದಲ್ಲಿ ಟನ್ ಗಟ್ಟಲೆ ತ್ಯಾಜ್ಯ ಇರುವುದರಿಂದ ಮಳೆಗಾಲದಲ್ಲಿ ಅಪಾಯ ಎದುರಾಗಬಹುದಾದ ಸಾಧ್ಯತೆಗಳಿದೆ. ಆದ್ದರಿಂದ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಮತ್ತು ನಗರದ ತ್ಯಾಜ್ಯವನ್ನು ವೈಜ್ಞಾನಿಕ ರೂಪದಲ್ಲಿ ವಿಲೇವಾರಿ ಮಾಡುವ ತ್ಯಾಜ್ಯ ಘಟಕದ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಿದರು.

ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಯಿಂದ ಕೆಲವು ವಾರ್ಡ್‌ಗಳ ರಸ್ತೆಗಳಿಗೆ ಹಾನಿಯಾಗಿದ್ದು, ಮಳೆಗಾಲದಲ್ಲಿ ಅಪಾಯ ಎದುರಾಗುವ ಮೊದಲು ರಸ್ತೆ ದುರಸ್ತಿಪಡಿಸಬೇಕು. ಮಳೆಗಾಲದಲ್ಲಿ ಅಪಾಯಕ್ಕೆ ಸಿಲುಕುವ ಪ್ರದೇಶಗಳನ್ನು ಈಗಲೇ ಗುರುತು ಮಾಡಿ ಜನರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಕಾವೇರಿ ಕಲಾಕ್ಷೇತ್ರದ ನೂತನ ಕಟ್ಟಡದ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಬೇಕು. ನೂತನ ಖಾಸಗಿ ಬಸ್ ನಿಲ್ದಾಣಕ್ಕೆ ಹೈಟೆಕ್ ಮಾದರಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net