ಮಣಿಪುರ ಘಟನೆಗೆ ಖಂಡನೆ

25 HANUR 3.
Published on

ಹನೂರು: ಮಣಿಪುರದಲ್ಲಿ ನಡೆದಿರುವ ಹೆಣ್ಣು ಮಕ್ಕಳ ಬೆತ್ತಲೆ ಮೆರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ಖಂಡನೀಯ. ಅಲ್ಲಿನ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ಒತ್ತಾಯಿಸಿದರು.


ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ಧ ದಸಂಸ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.


ಮಣಿಪುರದಲ್ಲಿ ನಡೆದಿರುವುದು ಅಮಾನವೀಯ ಕೃತ್ಯ. ಸಮಿತಿ ವತಿಯಿಂದ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಅಲ್ಲಿನ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರು ಹಾಗೂ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಬುಧವಾರ ಚಾ.ನಗರ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಗುವುದು. ಪದಾಧಿಕಾರಿಗಳು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.


ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಭಾಗ್ಯಮ್ಮ, ಶಿವಮ್ಮ, ಚಿಕ್ಕತಾಯಮ್ಮ, ಆರ್ಮುಗ, ಶರವಣ, ಶನಿಯಪ್ಪ, ಗಣೇಶ್, ಶಿವಸ್ವಾಮಿ, ಶಿವಣ್ಣ, ನಾಗರಾಜು, ಶಾಂತರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net