

ರಾಯಚೂರು: ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮತ್ತು ಹಿಂಸಾಚಾರದಲ್ಲಿ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ರಾಜ್ಯದಲ್ಲಿ ನಡೆದ ಬಾಲಕಿಯರ ಮೇಲೆ ಅತ್ಯಾಚಾರ ಘಟನೆ ಮತ್ತು ಕಲ್ಯಾಣ ಕರ್ನಾಟಕದ ಜನರ ಮೈ ಬಣ್ಣದ ಬಗ್ಗೆ ಅವಹೇಳನ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಸಾವಿರಾರು ಜನರು ಹತ್ಯೆಗೀಡಾಗಿದ್ದು, ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದ್ದರೂ ಅಲ್ಲಿನ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳುವಲ್ಲಿ ವಿಲವಾಗಿದೆ. ರಾಜ್ಯದಲ್ಲಿ ಸೌಜನ್ಯ ಪ್ರಕರಣ ನಡೆಸು 11 ವರ್ಷ ಕಳೆದರೂ ಕುಟುಂಬಕ್ಕೆ ನ್ಯಾಯ ದೊರೆತಿಲ್ಲ.
ಕಲಬುರಗಿ ಜಿಲ್ಲೆ ದ್ಯಾವಂತಗಿ ಗ್ರಾಮದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆದಿದ್ದು, ಈ ಎಲ್ಲ ಘಟನೆಗಳಿಗೆ ಸಂಬಂಸಿದಂತೆ ಸಮಗ್ರ ತನಿಖೆ ನಡೆಸುವ ಮೂಲಕ ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳಬೇಕು.
ಮಾಜಿ ಸಚಿವ ಅರಗ ಜ್ಞಾನೇಂದ್ರ ಕಲ್ಯಾಣ ಕರ್ನಾಟಕದ ಜನ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಣ್ಣದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಮಿತಿ ಜಿಲ್ಲಾ ಸಂಚಾಲಕ ಎಚ್.ರಂಗಪ್ಪ ಹೆಗಡೆ, ಪದಾಕಾರಿಗಳಾದ ಮಂಜುನಾಥ ಗಾಂನಗರ, ಎಂ.ಬಿ.ಮಾರೆಪ್ಪ, ಶರಣಪ್ಪ ಹಂಚಿನಾಳ, ರಂಗನಾಥ ಜಾಲಹಳ್ಳಿ, ಸೈಯದ್ ಪಾಷಾ ಪಾಲ್ಗೊಂಡಿದ್ದರು.