ಮಣಿಪುರ ಮಹಿಳೆಯರಿಗೆ ರಕ್ಷಣೆ ಕೊಡಿ

dss protest
Published on

ಬೀದರ್: ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು ಹಾಗೂ ಅತ್ಯಾಚಾರ, ಹಿಂಸಾಚಾರಕ್ಕೆ ಬಲಿಯಾಗುತ್ತಿರುವ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.
ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿದ ಪ್ರಮುಖರು, ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ, ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದು ಮಾನವ ಕುಲವೇ ತಲೆಗ್ಗಿಸುವಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಲವು ತಿಂಗಳಿಂದ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಮತ್ತೆ ಗಲಭೆ ಸೋಟಗೊಂಡಿದೆ. ಮನೆಯಲ್ಲಿ ಮಲಗಿದ ಮೂವರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಪೊಲೀಸರು ಮತ್ತು ದುಷ್ಕರ್ಮಿಗಳು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ದೂರಿದರು.
ಹಿಂಸಾಚಾರದಿಂದ ಈಗಾಗಲೇ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಜನರಿಗೆ ಗಾಯಗಳಾಗಿದ್ದು, ಸಾವಿರಾರು ಜನ ಬೇರೆ ಸ್ಥಳಗಳಿಗೆ ಪಲಾಯನಗೊಂಡಿದ್ದಾರೆ. ಮಹಿಳೆಯರು ಮತ್ತು ದುರ್ಬಲ ಸಮುದಾಯಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಮಣಿಪುರ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಜಿಲ್ಲಾ ಸಂಚಾಲಕ ಅರುಣ ಪಟೇಲ್, ಪ್ರಮುಖರಾದ ರಾಜು ಕಡ್ಯಾಳ್, ಅಶೋಕ ಗಾಯಕವಾಡ, ಶಿವರಾಜ ತಡಪಳ್ಳಿ, ರಾಜಕುಮಾರ ವಾಘಮಾರೆ, ದಯಾಸಾಗರ ಬೆಂಡೆ, ವಾಮನ್ ಮೈಸಲಗೆ, ರಮೇಶ ಬೆಲ್ದಾರ, ನರಸಿಂಗ ಮೇಟಿ, ಎಂ.ಎಸ್. ಮನೋಹರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net