ಮಣಿಪುರ ಮಹಿಳೆಯರಿಗೆ ರಕ್ಷಣೆ ನೀಡಿ

IMG-20230722-WA0037
Published on

ಕೊಪ್ಪಳ: ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆದು ಶಾಂತಿ ಕಾಪಾಡಲು ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಪದಾಧಿಕಾರಿಗಳು ಶನಿವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಮಣಿಪುರದಲ್ಲಿ ಕಳೆದ ಎರಡು ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಸಾರ್ವಜನಿಕರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. 200ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆರು ಸಾವಿರ ಜನ ವಲಸೆ ಹೋಗಿದ್ದಾರೆ. ಪ್ರಾಣ ರಕ್ಷಣೆಗಾಗಿ ಕಾಡು, ಮೇಡಿನಲ್ಲಿ ವಾಸಿಸುತ್ತಿದ್ದಾರೆ.

ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಗಲಭೆಕೋರರು ಮಹಿಳೆಯರನ್ನು ಬೆತ್ತಲುಗೊಳಿಸಿ ಹಿಂಸಿಸಿದ್ದು ನಾಗರಿಕರು ತಲೆ ತಗ್ಗಿಸುವಂತಾಗಿದೆ. ಗುಂಡಿಟ್ಟು ಮಹಿಳೆಯರನ್ನು ಹತ್ಯೆ ಮಾಡುತ್ತಿದ್ದಾರೆ. ಗಲಭೆ ತಡೆದು, ಶಾಂತಿ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ. ಜನರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ ಎಂದು ಆರೋಪಿಸಿದರು.

ಕೂಡಲೇ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಬೇಕು. ಹಿಂಸಾಚಾರ ತಡೆಗೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಆಗ್ರಹಿಸಿದರು. ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಪದಾಧಿಕಾರಿಗಳಾದ ಸಬಿಯಾ ಪಟೇಲ್, ಉಮೇರಾ ಫಾರುಕ್, ನಾಸಿರ್, ಅಹೆಮದ್, ರಿಜ್ವಾನ ಹೈದರ್, ಸಲೀಮಾ, ಇಸಾಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net