ಮಣಿಪುರ ಸರ್ಕಾರ ವಜಾಗೊಳಿಸಲು ಪ್ರತಿಭಟನೆ

ಮಣಿಪುರ ಸರ್ಕಾರ ವಜಾಗೊಳಿಸಲು ಪ್ರತಿಭಟನೆ
Published on

ಹಾಸನ; ಮಣಿಪುರ ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆದಿರುವ ಶೋಷಣೆಯನ್ನು ಖಂಡಿಸಿ ಅಂಬೇಡ್ಕರ್ ಸೇನೆಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಣಿಪುರ ರಾಜ್ಯದ ಕಾಂಗೋಷ್ಠಿ ಜಿಲ್ಲೆಯ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಬೆತ್ತಲೆ ಮೆರವಣಿಗೆ ನಡೆಸಿರುವ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು. ಅರಾಜಕತೆ ಸೃಷ್ಟಿಯಾಗಿರುವ ಮಣಿಪುರ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ, ದೈಹಿಕ ಮತ್ತು ಲೈಂಗಿಕವಾಗಿ ದೌರ್ಜನ್ಯ ಮತ್ತು ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪಿಗಳಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗಬೇಕೆಂದು ಸಹಿಹಾಕಿದ ಪ್ರತಿಭಟನಾಕಾರರು ಒತ್ತಾಯಿಸಿದರು.

ಅಂಬೇಡ್ಕರ್ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಗುಣಶೇಖರ, ಧನಲಲಕ್ಷ್ಮೀ, ಗೀತಾಂಜಲಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net