ಮಣಿಪುರ ಸರ್ಕಾರವನ್ನು ವಜಾಗೊಳಿಸಿ

27-07-Shiva-4
ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಲವಾಗಿರುವ ಮಣಿಪುರ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಸಮಿತಿ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್, ಪದಾಕಾರಿಗಳಾದ ಸುರೇಶ ಬಳಗಾನೂರು, ಶಿವಪ್ಪ, ಬೂದೆಪ್ಪ ಮ್ಯಾತ್ರಿ, ಹನುಮಂತು ಮಲ್ಕಾಪುರ, ರಮೇಶ ಗೋಸ್ಲೆ, ತುರುಮಂದೆಪ್ಪ ಕಟ್ಟಿಮನಿ, ಅಮರನಾಥ ಉದ್ಭಾಳ ಇದ್ದರು.
Published on

ರಾಯಚೂರು: ಜನಾಂಗೀಯ ಹಿಂಸಾಚಾರ ಮತ್ತು ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ವಿಲವಾಗಿರುವ ಮಣಿಪುರ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಮಹಿಳೆಯನ್ನು ಬೆತ್ತಲೆಗೊಳಸಿ ಮೆರವಣಿಗೆ ಮಾಡಿದ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಸಬೇಕು. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬುಡಕಟ್ಟು ಸಮುದಾಯದ ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿರುವುದು ತೀವ್ರ ಖಂಡನೀಯವಾಗಿದ್ದು, ರಾಜ್ಯದಲ್ಲಿ ಜನಾಂಗೀಯ ಸಂಘರ್ಷ ತೀವ್ರವಾಗಿದೆ. ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟು ಜನರು ಬದುಕಲು ಪರದಾಡುವಂತಾಗಿದೆ. ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಮಿತಿ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್, ಪದಾಕಾರಿಗಳಾದ ಸುರೇಶ ಬಳಗಾನೂರು, ಶಿವಪ್ಪ, ಬೂದೆಪ್ಪ ಮ್ಯಾತ್ರಿ, ಹನುಮಂತು ಮಲ್ಕಾಪುರ, ರಮೇಶ ಗೋಸ್ಲೆ, ತುರುಮಂದೆಪ್ಪ ಕಟ್ಟಿಮನಿ, ಅಮರನಾಥ ಉದ್ಭಾಳ, ಏಸಪ್ಪ, ರಂಗರಾಜು ನಾಯಕ, ವಿಜಯಕುಮಾರ, ನಾಗರಾಜ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net