ಮಣಿಪುರ ಹಿಂಸಾಚಾರ ನಿಯಂತ್ರಿಸಿ

09ydg01
Published on

ಯಾದಗಿರಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರ ನಿಯಂತ್ರಣಕ್ಕೆ ಒತ್ತಾಯಿಸಿ ಬುಧವಾರ ನಗರದಲ್ಲಿ ವಿವಿಧ ಚಚರ್್ ಹಾಗೂ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಕನಕ ವೃತ್ತದಲ್ಲಿ , ಡಾ.ಅಂಬೇಡ್ಕರ್ ವೃತ್ತ, ಸುಭಾಶ್ಚಂದ್ರ ಬೋಸ್ ವೃತ್ತದ ಮೂಲಕ ಜಿಲ್ಲಾಕಾರಿ ಕಚೇರಿ ತಲುಪಿತು. ಮಣಿಪುರದ ಕಾಂಗ್ಮೋಪಿ ಜಿಲ್ಲೆಯಲ್ಲಿ ಸುಮಾರು ಮೂರು ತಿಂಗಳಿನಿಂದ ಸತತವಾಗಿ ದುಷ್ಕಮರ್ಿಗಳ ಗುಂಪೊಂದು ಕ್ರೈಸ್ತ ಸಮುದಾಯವನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ನಡೆಸುತ್ತಿದೆ. ಅನೇಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ ಮಾಡಲಾಗುತ್ತಿದೆ. ಇಷ್ಟಾದರೂ ಕೇಂದ್ರ ಸಕರ್ಾರ ಈ ಬಗ್ಗೆ ಮೌನಕ್ಕೆ ಶರಣಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕ್ರೈಸ್ತರ ಮೇಲೆ ದೌರ್ಜನ್ಯ, ದಬ್ಬಾಳಿಕ ಕೊಲೆ, ಚಚರ್್ಗಳಿಗೆ ಬೆಂಕಿ ಹಚ್ಚಿ ದ್ವಂಸಗೊಳಿಸಿದ್ದು ಹಾಗೂ ಹೆಣ್ಣು ಮಕ್ಕಳ ಬೆತ್ತಲೆ ಮೆರವಣಿಗೆ ನಡೆಸಿರುವುದು ಇಡೀ ಮಾನವ ಕುಲಕ್ಕೆ ತಲೆ ತಗ್ಗಿಸುವ ಹೀನ ಕೃತ್ಯವಾಗಿದೆ. ಅಲ್ಲದೆ ದೌರ್ಜನ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಸಹ ಅತ್ಯಂತ ಹೆಯಕೃತ್ಯವಾಗಿದೆ ಎಂದರು.

ಶಾಂತಿಗೆ ಪ್ರಿಯರಾದ ಮುಗ್ಧ ಕ್ರೈಸ್ತ ಸಮುದಾಯದ ಮಹಿಳೆಯರು ಅನುಭವಿಸಿದ ಹಿಂಸೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನ ಮಂತ್ರಿಗಳ ಬೇಟಿ ಬಜಾವೋ, ಬೇಟಿ ಪಡಾವೋ ಎಂಬ ವಾಕ್ಯ ಹೇಳಿಕೆಗೆ ಮಾತ್ರ ಸೀಮಿತವಾಗಿದೆ. ಮಣಿಪುರದಲ್ಲಿ ನಡೆಯುತ್ತಿರುವ ಈ ಹಿಂಸಾಚಾರದ ಬಗ್ಗೆ ಪ್ರಧಾನಿಗಳು ಮೌನ ಮುರಿಯದಿರುವುದು ಸಹ ನೋವಿನ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗಲಭೆಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಮತ್ತು ರಾಜ್ಯ ಸಕರ್ಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ, ಕೊಲೆಗಳಂಥ ಹೀನ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಬೇಕು. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ನೀಡಬೇಕು. ಅಮಾಯಕರ ಮೇಲೆ ಮತ್ತು ಚಚರ್್ ಪಾದ್ರಿಗಳ ಮೇಲೆ ಹಾಕಿದ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net