ಮಣಿಪುರದ ಮಹಿಳೆಯರ ಬೆತ್ತಲೆ ಮೆರವಣಿಗೆ ಖಂಡಿಸಿ ಪ್ರತಿಭಟನೆ

15
Published on

ಮೈಸೂರು; ಮಣಿಪುರದಲ್ಲಿ ಬುಡಕಟ್ಟು ಮಹಿಳೆಯರ ಬೆತ್ತಲೆ ಮೆರವಣಿಗೆ, ರಾಜ್ಯದಲ್ಲಿ ನಡೆದ ಸೌಜನ್ಯಾ ಪ್ರಕರಣ ಖಂಡಿಸಿ ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ನಗರದ ಗಾಂಧಿಚೌಕದ ಬಳಿ ಪ್ರತಿಭಟನೆ ನಡೆಯಿತು.


ಕಳೆದ ಕೆಲವು ತಿಂಗಳಿಂದ ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಿಸಿದೆ. ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ಬೆತ್ತಲೆ ಮಾಡಿ ಅತ್ಯಾಚಾರ ಮಾಡಲಾಗಿದೆ. ಇದರೊಂದಿಗೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನವನ್ನು ಹರಾಜು ಹಾಕಲಾಗಿದೆ. ಮಣಿಪುರದಲ್ಲಿ ಶಾಂತಿ ಸ್ಥಾಪನೆಗಾಗಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು. ಮಣಿಪುರ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.


ರಾಜ್ಯದಲ್ಲಿ ಸೌಜನ್ಯಾ ಪ್ರಕರಣದ ಕುರಿತು ತನಿಖೆ ನಡೆಸಬೇಕು. ಈ ಮೂಲಕ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ದಿನ ಬಳಕೆಯ ಪದಾರ್ಥಗಳ ಬೆಲೆ ದುಬಾರಿಯಾಗಿದೆ. ಹಾಲಿನ ದರ, ಬೇಳೆ ಕಾಳುಗಳು, ದಿನಸಿ ಪದಾರ್ಥಗಳ ದರ ಏರಿಕೆಯಾಗಿದೆ ಎಂದು ಕಿಡಿಕಾರಿದರು.


ವೇದಿಕೆ ಅಧ್ಯಕ್ಷ ರಾಜಶೇಖರ್, ಸಾಹಿತಿ ಬನ್ನೂರು ರಾಜು, ಡಾ.ವರ್ಷ, ವಿರೂಪಾಕ್ಷಮ್ಮ, ಹೊನ್ನೇಗೌಡ, ಸಿಎಂ.ರಾಮು, ಲೋಕೇಶ್ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net