ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು

web1
ಮಣಿಪುರ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ರಾಮದುರ್ಗ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಜಿ.ಎಂ.ಜೈನೆಖಾನ್, ಸರಸ್ವತಿ ಮಾಳಶೆಟ್ಟಿ, ಮಹಾದೇವಿ ಕೆರೂರ ಇತರರಿದ್ದರು.
Published on

ರಾಮದುರ್ಗ: ಮಣಿಪುರ ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಸಿದ ದೌರ್ಜನ್ಯ ಖಂಡಿಸಿ ಪಟ್ಟಣದ ಮಿನಿ ವಿಧಾನಸೌಧದ ಎದುರು ಕಾರ್ಮಿಕ ಸಂಘಟನೆ, ಸಿಐಟಿಯು ಮತ್ತು ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ಬುಧವಾರ ಪ್ರತಿಭಟಿಸಿ, ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಸಿಐಟಿಯುವಿನ ಜಿಲ್ಲಾ ಕಾರ್ಯದರ್ಶಿ ಜಿ.ಎಂ.ಜೈನೆಖಾನ್ ಮಾತನಾಡಿ, ಮಣಿಪುರದಲ್ಲಿ ಮಹಿಳಾ ದೌರ್ಜನ್ಯ ನಿಯಂತ್ರಿಸುವಲ್ಲಿ ವಿಲವಾದ ಬೀರೆನ್ ಸಿಂಗ್ ಸರ್ಕಾರವನ್ನು ವಜಾಮಾಡಬೇಕು. ಬಹುಸಂಖ್ಯಾತರನ್ನು ಒಲೈಸುವ ರಾಜಕಾರಣದಿಂದ ಹಿಂಸಾಚಾರ ಭುಗಿಲೆದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಇಂತಹ ಸಂದಿಗ್ಧ ಸಮಯದಲ್ಲಿ ಪ್ರಧಾನಮಂತ್ರಿ ಮಣಿಪುರಕ್ಕೆ ಭೇಟಿ ನೀಡದಿರುವುದು ಖಂಡನೀಯ ಎಂದರು.

3 ತಿಂಗಳಿಂದ ಹಿಂಸಾಚಾರ ನಡೆಯುತ್ತಿದ್ದರೂ ಅಲ್ಲಿನ ಸಿಎಂ, ಕೇಂದ್ರ ಸರ್ಕಾರ ಮೌನವಹಿಸಿದೆ. ಮಣಿಪುರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು. ಜನರಿಗೆ ರಕ್ಷಣೆ ನೀಡಬೇಕು. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಕಟ್ಟಡ ಕಾರ್ಮಿಕ ಸಂಘದ ತಾಲೂಕಾಧ್ಯಕ್ಷ ನಾಗಪ್ಪ ಸಂಗೊಳ್ಳಿ, ಜನವಾದಿ ಮಹಿಳಾ ಸಂಘಟನೆಯ ಸರಸ್ವತಿ ಮಾಳಶೆಟ್ಟಿ, ಮಹಾದೇವಿ ಕೆರೂರ, ಶಕುಂತಲಾ ನಾರಾಯಣಕರ, ತುಳಸಮ್ಮ ಮಾಳದಕರ, ಶಕೀಲಾ ಮುಜಾವರ, ಬೋರಮ್ಮ ತೆಕ್ಕಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net