ಮಣ್ಣಿನ ಫಲವತ್ತತೆ ಕಾಪಾಡಿ

JSSKVK1 copy
ಸುತ್ತೂರಿನ ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
Published on

ಸುತ್ತೂರು: ಮಣ್ಣು ಆಹಾರದ ಮೂಲವಾಗಿದ್ದು, ಇದರ ಫಲವತ್ತತೆ ಕಾಪಾಡುವಂತೆ ಕೃಷಿ ತಂತ್ರಜ್ಞರ ಸಂಸ್ಥೆಯ ಉಪಾಧ್ಯಕ್ಷ, ನಿವೃತ್ತ ಜಂಟಿ ಕೃಷಿ ನಿರ್ದೇಶಕ ಡಾ.ಎಂ.ಮಹಂತೇಶಪ್ಪ ಸಲಹೆ ನೀಡಿದರು.

ಸುತ್ತೂರಿನ ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ರೈತರು ಮಣ್ಣಿನ ಸಂರಕ್ಷಣೆಗೆ ಮುಂದಾಗಬೇಕು. ಜತೆಗೆ ಮಹಿಳೆಯರು ರೈತ ಉತ್ಪಾದಕ ಸಂಘಗಳನ್ನು ಸ್ಥಾಪಿಸಿಕೊಂಡು, ಸರ್ಕಾರದ ಸಹಾಯಧನದೊಂದಿಗೆ ತಮ್ಮ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಕಲ್ಪಿಸಿಕೊಳ್ಳಲು ಕರೆನೀಡಿದರು.

ಜಿಪಂ ಮಾಜಿ ಸದಸ್ಯೆ ಮಂಗಳಾ ಸೋಮಶೇಖರ್ ಮಾತನಾಡಿ, ಕೃಷಿಯಲ್ಲಿ ಮಹಿಳೆಯರು ಪುರುಷರಿಗಿಂತ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಕೃಷಿ ಮಹಿಳೆಯರು ಹೆಚ್ಚು ಸಂಘಟಿತರಾಗಿ ಕೃಷಿಯೇತರ ಚಟುವಟಿಕೆಗಳನ್ನು ಹಮ್ಮಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಕಿವಿಮಾತು ಹೇಳಿದರು.

ಜಿಪಂ ಮಾಜಿ ಸದಸ್ಯ ಎ.ಎಸ್.ಗುರುಸ್ವಾಮಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಸ್.ದೀಪಕ್, ಕೆವಿಕೆ ಪ್ರಭಾರ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥೆ ಎಚ್.ವಿ.ದಿವ್ಯಾ, ಮಣ್ಣು ವಿಜ್ಞಾನಿಯಾದ ಜೆ.ಜಿ.ರಾಜಣ್ಣ, ವೆಂಕಟೇಶ್, ಡಾ.ಜಿ.ಎಂ.ವಿನಯ್, ಡಾ.ಯು.ಎಂ.ರಕ್ಷಿತ್ ರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net