ಮತ ಚಲಾಯಿಸಿದ ಕೈ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್

SHREYAS Patel- Cong
ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಪಟ್ಟಣದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಜತೆಯಲ್ಲಿ ಪತ್ನಿ ಅಕ್ಷತಾ ಇದ್ದರು.
Published on

ಹೊಳೆನರಸೀಪುರ: ಹೊಳೆನರಸೀಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಹಾಗೂ ಅವರ ಪತ್ನಿ ಅಕ್ಷತಾ ಜತೆಯಲ್ಲಿ ಪಟ್ಟಣದ 277ರ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು.

ಕ್ಷೇತ್ರದ ಮತದಾರರ ಮೇಲೆ ನನಗೆ ಸಂಪೂರ್ಣ ವಿಶ್ವಾಸ ಇದೆ. ಸ್ವಾತಂತ್ರೃ, ಸ್ವಾಭಿಮಾನಕ್ಕಾಗಿ ಮತ ಚಲಾಯಿಸುತ್ತಾರೆ. ಕ್ಷೇತ್ರದ ಎಲ್ಲ ಹೋಬಳಿಯ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರವಾದ ಒಲವಿದೆ. ನಮ್ಮ ಪಕ್ಷದ ಗ್ಯಾರಂಟಿ ಭರವಸೆಗಳು ಮತದಾರರ ಮನಸ್ಸನ್ನು ಗೆದ್ದಿದೆ. ಮತದಾರರ ಒಲವಿನಂತೆ ನನಗೆ ಗೆಲುವು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net