ಮತ ಜಾಗೃತಿಗೆ ಮಹಿಳಾ ಕ್ರಿಕೆಟ್ ಪಂದ್ಯಾವಳಿ

30 YERRISWAMY 06..
Published on

ಬಳ್ಳಾರಿ : ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಇಲ್ಲಿ ನ ಕೋಟೆ ಪ್ರದೇಶದ ಸಂತಜಾನರ ಕಾಲೇಜು ಮೈದಾನದಲ್ಲಿ ಮಂಗಳವಾರ ಮಹಿಳಾ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ತಾಪಂ ಇಓ ಮಡಗಿನ ಬಸಪ್ಪ ಮಾತನಾಡಿ, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಇದ್ದಂತೆ. ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವ ಸುಭದ್ರಗೊಳಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಕಡಿಮೆ ಪ್ರಮಾಣದ ಮತದಾನ ಆಗುತ್ತಿದ್ದು, ತಪ್ಪದೆ ಮತ ಚಲಾಯಿಸಬೇಕು. ಕ್ರಿಕೆಟ್ ಆಡುವ ಮೂಲಕ ವಿನೂತನವಾಗಿ ಮತ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹಮ್ಮದ್ ಗೌಸ್.ಆರ್ ಮಾತನಾಡಿ, ಎಲ್ಲಾ ಕ್ರೀಡಾಪಟುಗಳು ತಪ್ಪದೇ ಮತ ಚಲಾಯಿಸಬೇಕು ಹಾಗೂ ತಮ್ಮ ಸುತ್ತಮುತ್ತಲಿನ ಎಲ್ಲಾ ಮತದಾರರನ್ನು ಚುನಾವಣೆಯಲ್ಲಿ ಪಾಲ್ಗೊಂಡು ಮತ ಚಲಾಯಿಸುವಂತೆ ಪ್ರೇರೇಪಿಸಬೇಕೆಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net