ಮತ ಹಾಕಿ ಹಕ್ಕು ಚಲಾಯಿಸಿ

26mnd3-National Voters Day
Published on

ಮುಂಡಗೋಡ: ನಾವೆಲ್ಲರೂ ಸಂವಿಧಾನದ ಚೌಕಟ್ಟಿನಲ್ಲಿ ಜೀವನ ನಡೆಸಬೇಕು. ಸಂವಿಧಾನ ನಮಗೆ ಮತ ಚಲಾಯಿಸುವ ಹಕ್ಕು ನೀಡಿದೆ ಎಂದು ಇಲ್ಲಿನ ಸಿವಿಲ್ ನ್ಯಾಯಾಧೀಶ ಕೇಶವ ಕೆ. ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದ ಸಭಾಭವನದಲ್ಲಿ ಕಾನೂನು ಸೇವಾ ಸಮಿತಿ ಮತ್ತು ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

18 ವರ್ಷ ಹಾಗೂ ಮೇಲ್ಪಟ್ಟವರಿಗೆ ಮತದಾನದ ಹಕ್ಕನ್ನು ನೀಡಲಾಗಿದೆ. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಬೇಕು. ಚುನಾವಣೆ ಸಮಯದಲ್ಲಿ ಕಡ್ಡಾಯವಾಗಿ ಪ್ರತಿಯೊಬ್ಬರೂ ಮತ ಹಾಕಿ ಹಕ್ಕು ಚಲಾಯಿಸಬೇಕು ಎಂದರು. ತಹಸೀಲ್ದಾರ್ ಶ್ರೀಧರ ಮುಂದಲಮನಿ ಮಾತನಾಡಿದರು.

ತಾಪಂ ಇಒ ಪ್ರವೀಣ ಕಟ್ಟಿ, ಬಿಇಒ ವಿ.ವಿ. ನಡುವಿನಮನಿ, ಪ್ರಾಚಾರ್ಯು ಇಂದಿರಾ ಬಾಗಲಕೋಟೆ, ಗ್ರೇಡ್-2 ತಹಸೀಲ್ದಾರ್ ಜಿ.ಬಿ. ಭಟ್ಟ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಕೃಷ್ಣ ಡಿ., ಪ್ರಭಾರ ಸಿಡಿಪಿಒ ದೀಪಾ ಬಂಗೇರ, ರಾಘವೇಂದ್ರ ಗಿರಡ್ಡಿ, ಶ್ರೀಕಾಂತ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಕಾಲೇಜ್ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net