ಮತಕ್ಕಾಗಿ ಒಳ ಮೀಸಲಾತಿ ಸಲ್ಲದು

Published on

ಮೈಸೂರು: ಒಳ ಮೀಸಲಾತಿ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರೂ, ಮತಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಒಳ ಮೀಸಲಾತಿ ನೀಡಿದ್ದೇವೆ ಎಂದು ಜನರನ್ನು ವಂಚನೆ ಮಾಡಲು ಹೊರಟಿದೆ ಎಂದು ರಾಜ್ಯ ಭೋವಿ (ವಡ್ಡರ) ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಚೌಡಯ್ಯ ಆರೋಪಿಸಿದರು.
ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಸಮುದಾಯಗಳನ್ನು ವರ್ಗೀಕರಿಸಿ ಒಳ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಇದು ಸಂವಿಧಾನ ವಿರುದ್ಧವೆಂದು ಸುಪ್ರಿಂಕೋರ್ಟ್ ತಿಳಿಸಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಚಿನ್ನಪ್ಪರೆಡ್ಡಿ ಆಯೋಗದ ಪ್ರಕರಣದಲ್ಲಿ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಆಂಧ್ರ ಸರ್ಕಾರಕ್ಕೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರವಿಲ್ಲ ಎಂದು ಹೇಳಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಮತಕ್ಕಾಗಿ ಜನರನ್ನು ಮರುಳು ಮಾಡಲು ಒಳ ಮೀಸಲಾತಿ ಘೋಷಿಸಿದೆ ಎಂದು ದೂರಿದರು.
ಪದಾಧಿಕಾರಿಗಳಾದ ಎ. ರಾಮಯ್ಯ, ಎಸ್.ಆರ್. ಸೀತಾರಾಮು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net