ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಭೇಟಿ

bkt-5-6
Published on

ಬಾಗಲಕೋಟೆ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಿನ್ನಲೆಯಲ್ಲಿ ಜಿಲ್ಲೆಯ ಬೀಳಗಿ, ಮುಧೋಳ, ಜಮಖಂಡಿ ಹಾಗೂ ತೇರದಾಳ ಮತಕ್ಷೇತ್ರಗಳ ವ್ಯಾಪ್ತಿಯ ಕೆಲವು ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಅರ್ಹ ಮತದಾರರನ್ನು ಹೊಂದಿದ ಪರಿಶುದ್ದವಾದ ಮತದಾರರ ಪಟ್ಟಿ ತಯಾರಿಸುವ ನಿಟ್ಟಿನಲ್ಲಿ ಪರಿಷ್ಕರಣೆ ಕಾರ್ಯ ನಡೆದಿದ್ದು, ಜಮಖಂಡಿ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಮತಕ್ಷೇತ್ರಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಷ್ಕರಣೆ ಕಾರ್ಯವನ್ನು ಪರಿಶೀಲಿಸಿದರು. ಪ್ರತಿಯೊಂದು ಮತಕ್ಷೇತ್ರದಲ್ಲಿ 3 ಮತಗಟ್ಟೆಗಳಂತೆ ಒಟ್ಟು 12 ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಪರಿಶೀಲಿಸಿದರು.


ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, 18 ವರ್ಷ ತುಂಬಿದ ಹೊಸ ಮತದಾರರ ಸೇರ್ಪಡೆಗೆ ಆದ್ಯತೆ ನೀಡಬೇಕು. ಕಾಲೇಜುಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದರು. ಮನೆ ಮನೆ ಸಮೀಕ್ಷೆ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದರು. ಕರಡು ಮತದಾರರ ಪಟ್ಟಿ, ಮನೆ ಮನೆ ಸಮೀಕ್ಷೆ ವರದಿಗಳ ಮಾಹಿತಿಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ, ಬೀಳಗಿ ತಹಶೀಲ್ದಾರ ಸುಹಾಸ ಇಂಗಳೆ, ಜಮಖಂಡಿ ತಹಶೀಲ್ದಾರ ಸದಾಶಿವ, ಮುಧೋಳ ತಹಸೀಲ್ದಾರ ವಿನೋದ, ರಬಕವಿ-ಬನಹಟ್ಟಿ ತಹಸೀಲ್ದಾರ ಸಂಜು ಇಂಗಳಿಗೆ ಸೇರಿದಂತೆ ಮತಗಟ್ಟೆ ಅಧಿಕಾರಿಗಳು ಇದ್ದರು.

*ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ
ಜಮಖಂಡಿ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಮುಧೋಳ, ರಬಕವಿ-ಬನಹಟ್ಟಿ, ಬೀಳಗಿ ತಾಲೂಕಿನ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನ್ಯಾಯಬೆಲೆ ಅಂಗಡಿಗಳಲ್ಲಿ ಹಂಚಿಕೆಯಾಗುತ್ತಿರುವ ಪಡಿತರ ದಾನ್ಯಗಳ ಪ್ರಮಾಣಕ್ಕನುಗುಣವಾಗಿ ಹಂಚಿಕೆಯಾದ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net