ಮತಗಟ್ಟೆಯಲ್ಲಿ ಮತದಾರ ದಿನ ಆಚರಿಸಿ

0901Klb04
Published on

ಕಲಬುರಗಿ: ಮತಗಟ್ಟೆ ಕೇಂದ್ರಗಳಲ್ಲಿ ಜ.೨೫ರಂದು ಮತದಾರರ ದಿನ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರಾಷ್ಟಿçÃಯ ಮತದಾರರ ದಿನವಾದ ಜ.೨೫ರಂದು ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಗಳನ್ನು ತಯಾರಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ತಾಲೂಕುಗಳ ಪಂಚಾಯಿತಿಗಳಲ್ಲಿ ತಪ್ಪದೆ ಆಚರಿಸಬೇಕು. ಮತದಾನಕ್ಕಿಂತ ಶ್ರೇಷ್ಠ ದಾನ ಇನ್ನೊಂದಿಲ್ಲ, ನಾನು ಕಡ್ಡಾಯವಾಗಿ ಮತದಾನ ಮಾಡುವೆ ವಿಷಯದ ಮೇಲೆ ಶಾಲೆ, ಕಾಲೇಜ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಬಂಧ ಸ್ಪರ್ಧೆ, ಚರ್ಚೆ, ಚಿತ್ರಕಲೆ, ರಸಪ್ರಶ್ನೆ, ಹಾಡು, ಸ್ಕಿಟ್ ಸೇರಿ ಇತರೆ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ಪತ್ರ ನೀಡಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಹೊಸ ಮತದಾರರಿಗೆ, ಪಿಡಬ್ಲೂಡಿ ಮತದಾರರಿಗೆ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ವಿತರಿಸಬೇಕು. ಒಂಬತ್ತು ವಿಧಾನಸಭೆ ಕ್ಷೇತ್ರಗಳ ತಲಾ ಮೂರು ಅತ್ಯುತ್ತಮ ಮತಗಟ್ಟೆ ಅಧಿಕಾರಿಗಳನ್ನು ಗುರುತಿಸಿ, ಪ್ರಮಾಣ ಪತ್ರ ನೀಡಬೇಕು ಎಂದು ತಿಳಿಸಿದರು.

ಪ್ರತಿಜ್ಞಾ ವಿಧಿ ಬೋಧಿಸುವ, ಸ್ವೀಕರಿಸುವ ಪ್ರಕ್ರಿಯೆ ನಡೆಸಬೇಕು ಎಂದರು. ಜಿಪಂ ಸಿಇಒ ಭಂವರ ಸಿಂಗ್ ಮೀನಾ, ಎಸ್‌ಪಿ ಅಡ್ಡೂರು ಶ್ರೀನಿವಾಸುಲು, ಡಿಸಿಪಿ ಕನಿಕಾ ಸಿಕ್ರಿವಾಲ್, ಪಾಲಿಕೆ ಉಪ-ಆಯುಕ್ತ ಅವಿನಾಶ ಸಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net