

ಚಿತ್ರದುರ್ಗ: ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾನ ಕೇಂದ್ರಗಳ ಕರಡು ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಶುಕ್ರವಾರ ಬಿಡುಗಡೆಗೊಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪ್ರಕ್ರಿಯೆ ನಡೆಯಿತು.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ 285 ಮತಗಟ್ಟೆಗಳು, ಚಳ್ಳಕೆರೆ-260, ಚಿತ್ರದುರ್ಗ-288, ಹಿರಿಯೂರು-287, ಹೊಸದುರ್ಗ-242, ಹೊಳಲ್ಕೆರೆ-299 ಸೇರಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 1,661 ಮತಗಟ್ಟೆಗಳಿವೆ.
ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಎಡಿಸಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಚುನಾವಣಾ ತಹಸೀಲ್ದಾರ್ ಎಲ್.ಜಯಣ್ಣ, ವಿವಿಧ ಪಕ್ಷಗಳ ಮುಖಂಡರಾದ ಡಿ.ಗೋಪಾಲಸ್ವಾಮಿ ನಾಯಕ, ಡಿ.ಎನ್.ಮೈಲಾರಪ್ಪ, ಯಶವಂತ್‌ಕುಮಾರ್, ಗೌಸ್‌ಪೀರ್, ಎನ್.ಪ್ರಕಾಶ್ ಇತರರಿದ್ದರು.