

ಚಿತ್ರದುರ್ಗ: ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಂಗವಾಗಿ ಸೋಮವಾರ ಕ್ಯಾಂಡಲ್ ಲೈಟ್ ಜಾಥಾ ನಡೆಯಿತು.
ಮದಕರಿನಾಯಕ ವೃತ್ತದಿಂದ ಆರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಇತರರಿದ್ದರು.