ಮತದಾನ ಜಾಗೃತಿಗೆ ವಿನೂತನ ಪ್ರಯೋಗ

BKT 4 ( My Vote
Published on

ಬಾಗಲಕೋಟೆ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾವಿರಾರು ಜನರು ಮೊಬೈಲ್ ಟಾರ್ಚ್ ಬೆಳಗಿಸಿ ಮತದಾನದ ಬಗ್ಗೆ ಶನಿವಾರ ರಾತ್ರಿ ಜಾಗೃತಿ ಮೂಡಿಸಲಾಯಿತು.

ಜಿಲ್ಲಾಡಳಿತದ ಹೊಸ ಪ್ರಯತ್ನ ಮೆಚ್ಚುಗೆಗೆ ಪಾತ್ರವಾಯಿತು. ಬಾಗಲಕೋಟೆ ಮೈ ವೋಟ್ ಮೈ ಫ್ಯೂಚರ್ 2023 (ನಮ್ಮ ಮತ ನಮ್ಮ ಭವಿಷ್ಯ) ಎಂಬ ಘೋಷ ವಾಕ್ಯವನ್ನು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮೂಡುವಂತೆ ಮಾಡಿ ಎಲ್ಲರ ಗಮನ ಸೆಳೆಯಲಾಯಿತು. ವಿನೂತನ ಪ್ರಯೋಗದ ಮೂಲಕ ಜಿಲ್ಲಾದ್ಯಂತ ಮತದಾನ ಜಾಗೃತಿಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಟಿ.ಭೂಬಾಲನ್ ಜಂಟಿಯಾಗಿ ಚಾಲನೆ ನೀಡಿದರು.
ಡಿಸಿ ಪಿ.ಸುನೀಲಕುಮಾರ ಮತ ದಾರರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಯುಕೆಪಿ ಮಹಾವ್ಯವಸ್ಥಾಪಕ ಭಂವರ ಸಿಂಗ್ ಮೀನಾ, ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಕನಿಷ್ಕ,
ಬಾಗಲಕೋಟೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಜಮಖಂಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net