ಮತದಾನ ಜಾಗೃತಿಯ ಬೀದಿ ನಾಟಕ ಹಾಗೂ ಕಾಲ್ನಡಿಗೆ ಜಾಥಾಕ್ಕೆ ಚಾಲನೆ

ಮತದಾನ ಜಾಗೃತಿಯ ಬೀದಿ ನಾಟಕ ಹಾಗೂ ಕಾಲ್ನಡಿಗೆ ಜಾಥಾಕ್ಕೆ ಚಾಲನೆ
Published on

ಹಾಸನ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಮಹಾವೀರ ವೃತ್ತದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಶುಕ್ರವಾರ ಬೆಳಿಗ್ಗೆ ಹಮಿಕೊಳ್ಳಲಾಗಿದ್ದ ಮತದಾನ ಜಾಗೃತಿಗಾಗಿ ಬೀದಿ ನಾಟಕ ಹಾಗೂ ಕಾಲ್ನಡಿಗೆ ಜಾಥಾಕ್ಕೆ ನಗರಸಭೆ ಪರಿಸರ ಸಂರಕ್ಷಣಾಧಿಕಾರಿ ವೆಂಕಟೇಶ್ ಅವರು ಹಸಿರು ಬಾವುಟ ಪ್ರದರ್ಶಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಏ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ ಮಾಡುವ ಮೂಲಕ ಉತ್ತಮ ನಾಯಕನನ್ನು ಆಯ್ಕೆ ಮಾಡಲು ಪ್ರಜಾಪ್ರಭುತ್ವಕ್ಕೆ ಹಕ್ಕು ನೀಡಿದೆ. ಯಾರೂ ಕೂಡ ದೂರ ಉಳಿಯದೆ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು.
ಏ. 26 ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ತಪ್ಪದೇ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಇದೇ ವೇಳೆ ಮನವಿ ಮಾಡಿದರು. ಜಾಗೃತಿ ಜಾಥದಲ್ಲಿ ನಗರಸಭೆ ಆರೋಗ್ಯಾಧಿಕಾರಿ ಪ್ರಸಾದ್, ಚೇತನ್, ಹಿರಿಯ ಕಲಾವಿದ ಬಿ.ಟಿ. ಮಾನವ ಹಾಗೂ ಕಲಾವಿದರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net