ಮತದಾನ ಪ್ರತಿಯೊಬ್ಬರ ಆದ್ಯ ಕರ್ತವ್ಯ

30ydg05
Published on


ಯಾದಗಿರಿ :ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜೀವನ ಸಾಗಿಸುತ್ತಿರುವ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವುದು ಅವರ ಕರ್ತವ್ಯ ಆಗಿದೆ ಎಂದು ಜಿಲ್ಲಾಕಾರಿ ಸ್ನೇಹಲ್ ಆರ್., ತಿಳಿಸಿದರು.
ಭಾನುವಾರ ಇಲ್ಲಿನ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಸ್ವೀಪ್ ಸಮಿತಿಯ ಸಹಯೋಗದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ದ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ಪ್ರಜಾಪ್ರಭುತ್ವದ ಹಬ್ಬ ಮೇ.10 ಮತದಾನ ಎಂಬ ಧ್ಯೇಯವಾಕ್ಯವನ್ನು ಆಯೋಗ ಹೊರಡಿಸಿದೆ. ಜಿಲ್ಲೆಯಲ್ಲಿ ಈ ಬಾರಿ 4 ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಬೇಕಿದೆ ಎಂದರು.
ಪ್ರಜ್ಞಾವಂತ ಮತದಾರರು ಮತದಾನದಿಂದ ದೂರ ಸರಿಯುತ್ತಿರುವುದು ಬೇಸರದ ಸಂಗತಿ. ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ಮತದಾನದ ಬಗ್ಗೆ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಈಗಾಗಲೇ ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ. ಯುವಕರು ಸಹ ತಮ್ಮ ಮನೆಯಲ್ಲಿನ ಸದಸ್ಯರಿಗೆ ಹೆಚ್ಚಿನ ಪ್ರಮಾಣದಲ್ಲಿ ತಿಳಿವಳಿಕೆ ಮೂಡಿಡಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಗರಿಮಾ ಪನ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ಸಿ.ಬಿ ವೇದಮೂತರ್ಿ, ಅರಣ್ಯ ಸಂರಕ್ಷಣಾಕಾರಿ ಖಾಜಲ್ ಪಾಟೀಲ್, ಕೈಗಾರಿಕಾ ಇಲಾಖೆ ಜಂಟಿ ನಿದರ್ೇಶಕಿ ರೇಖಾ ಮ್ಯಾಗೇರಿ, ಹಿಂದುಳಿದ ವರ್ಗಗಳ ಕಲ್ಯಾಣಾಕಾರಿ ರಾಘವೇಂದ್ರ, ಹಿರಿಯ ಭೂವಿಜ್ಞಾನಿ ಡಾ.ಪುಷ್ಪಾವತಿ ಕೆ ಎನ್, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೇಶಕಿ ಸರೋಜಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net