ಮತದಾನ ಪ್ರಮಾಣದ ಹೆಚ್ಚಳಕ್ಕೆ ಜಾಗೃತಿ,ಸಿಇಒ

CTD 28 SWEEP--0006
Published on

ಚಿತ್ರದುರ್ಗ: ಲೋಕಸಭಾ ಚುನಾವಣೆ ಮತದಾನ ಪ್ರಮಾಣ ಹೆಚ್ಚಳ ನಿಟ್ಟಿನಲ್ಲಿ ಮತದಾರರ ಜಾಗೃತಿಗಾಗಿ ನಾನಾ ಕಾರ‌್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ,ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಹೇಳಿದರು.
ನಗರ ವ್ಯಾಪ್ತಿಯ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಹೆಚ್ಚಿಸುವ ಸಲುವಾಗಿ ಗುರುವಾರ ಏರ್ಪಡಿಸಿದ್ದ ವಾಕಥಾನ್ ವೇಳೆ ಮಾತನಾಡಿದ ಅವರು, ಮನೆ,ಮನೆಗೆ ತೆರಳುವುದು ಸೇರಿದಂತೆ ಹಲವು ಕಾರ‌್ಯಕ್ರಮಗಳ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.
ಕೋಟೆ ಬಳಿಯಿಂದ ಆರಂಭವಾದ ವಾಕ್‌ಥಾನ್ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾ ಕ್ರೀಡಾಂಗಣ ಬಳಿ ಸಮಾಪನಗೊಂ ಡಿತು.ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್,ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್,ನಗರಸಭೆ ಆಯಕ್ತೆ ಎಂ.ರೇಣಕಾ,ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಒ.ಪರಮೇಶ್ವರಪ್ಪ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net