ಮತದಾನಕ್ಕೆ ಸಕಲ ಸಿದ್ಧತೆ

24 YLP 03
Published on

ಯಲ್ಲಾಪುರ: ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ತಹಸೀಲ್ದಾರ್ ಗಣಪತಿ ಶಾಸ್ತ್ರಿ ಮನವಿ ಮಾಡಿದ್ದಾರೆ.

ಗುರುವಾರ ಚುನಾವಣಾ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು, ತಾಲೂಕಿನ 94 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಎಲ್ಲ 33 ಮಾರ್ಗಗಳಿಗೆ ಮತಪೆಟ್ಟಿಗೆಗಳನ್ನು ತಲುಪಿಸಲು ವಾಹನಗಳನ್ನು ನಿಗದಿಗೊಳಿಸಲಾಗಿದೆ. ಮತಗಟ್ಟೆಗಳಲ್ಲಿ ಅಂಗವಿಕಲರು, ವೃದ್ಧರು ಹಾಗೂ ರೋಗಿಗಳಿಗೆ ಅನುಕೂಲವಾಗುವಂತೆ ವೀಲ್​ಚೇರ್ ವ್ಯವಸ್ಥೆ ಕಲ್ಪಿಸಲಾಗಿದೆ. ಕರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ ನೀಡಲಾಗುವುದು. ಮತಗಟ್ಟೆಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದ್ದು, ಕರೊನಾ ಲಕ್ಷಣವಿದ್ದವರಿಗೆ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ರ್ಯಾಪಿಡ್ ಕಿಟ್ ಪೂರೈಸಲಾಗಿದೆ ಎಂದು ಮಾಹಿತಿ ನೀಡಿದರು.

ಹಣ, ಹೆಂಡ ಹಂಚಿಕೆ, ಮತ ಚಲಾಯಿಸುವುದಕ್ಕೆ ಬರಲು ವಾಹನ ವ್ಯವಸ್ಥೆ ಇತ್ಯಾದಿ ಅಕ್ರಮಗಳು ನಡೆದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net