ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಕಾರಾತ್ಮಕ ಸ್ಪಂದನೆ

dc
Published on

ಬಾಗಲಕೋಟೆ: ಚುನಾವಣಾ ಮತದಾನದಿಂದ ದೂರ ಉಳಿಯಲು ಮುಂದಾಗಿದ್ದ ಮಹಾಲಿಂಗಪೂರದ ಹೋರಾಟಗಾರರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆಂದು ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.

ಬುಧವಾರ ಮಹಾಲಿಂಗಪೂರದ ಜನತೆಯೊಂದಿಗೆ ಪರಸ್ಪದ ಮಾತುಕತೆಯ ನಡೆಸುವ ಮೂಲಕ ಅವರ ಮನ ಒಲಿಸುವಲ್ಲಿ ಯಶಸ್ವಿಯಾದರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರತಿಯೊಬ್ಬರ ಹಕ್ಕಾಗಿದ್ದು, ಅದನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸುವಂತೆ ಮನವಿ ಮಾಡಿಕೊಂಡರು. ಈ ಸಮಯದಲ್ಲಿ ಜಿ.ಪಂ ಸಿಇಓ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವತಿಷ್ಠಾಧಿಕಾರಿ ಅಮರನಾಥ ರೆಡ್ಡಿ, ರಬಕವಿ-ಬನಹಟ್ಟಿ ತಹಶೀಲ್ದಾರ ಗಿರೀಶ ಸ್ವಾದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net