ಮತದಾನದಿಂದ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣ

24 yelandur 02 - Copy
Published on

ಯಳಂದೂರು: 18 ವರ್ಷ ತುಂಬಿದ ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡುವ ಮೂಲಕ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಿಸಬೇಕು. ಸುತ್ತ-ಮುತ್ತಲಿನ ಜನರಿಗೂ ಮತದಾನದ ಮಹತ್ವ ತಿಳಿಸಿಕೊಡಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎನ್.ರವಿಕೀರ್ತಿ ತಿಳಿಸಿದರು.


ಅವರು ಇತ್ತೀಚಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಪಟ್ಟಣದ ಪ್ರದೇಶದಲ್ಲಿ ಪ್ರತಿ ವಾರ್ಡ್‌ಗಳಲ್ಲಿ ಮಹಿಳೆಯರು, ಯುವ ಸಮೂಹ ಸೇರಿದಂತೆ ಎಲ್ಲ ಪ್ರದೇಶಗಳಿಗೂ ಭೇಟಿ ನೀಡಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ನಿರ್ಭೀತಿ, ನಿರಾತಂಕವಾಗಿ ಯಾವುದೇ ಆಸೆ, ಆಮೀಷಗಳಿಗೆ ಒಳಗಾಗದೆ ಮತದಾನ ಮಾಡಬೇಕು. ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಚುನಾವಣಾ ಸಾಕ್ಷರತೆ ಅಗತ್ಯವಾಗಿದ್ದು, ಯುವ ಜನರು ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.


ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಬಾಲಸುಬ್ರಮಣ್ಯ, ಸಿಬ್ಬಂದಿ ಪರಶಿವಮೂರ್ತಿ, ಮಲ್ಲಿಕಾರ್ಜುನ, ರಘು ಸೇರಿದಂತೆ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net