ಮತದಾರರ ಜಾಗೃತಿ ಬೈಕ್ ಜಾಥಕೆ ಜಿಲ್ಲಾಧಿಕಾರಿ: ಚಾಲನೆ

ಮತದಾರರ ಜಾಗೃತಿ ಬೈಕ್ ಜಾಥಕೆ ಜಿಲ್ಲಾಧಿಕಾರಿ: ಚಾಲನೆ
Published on

ಹಾಸನ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದ ಲೋಕಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮತದಾರರ ಜಾಗೃತಿ ಬೈಕ್ ಜಾಥಕೆ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ ಮಾತನಾಡಿ, ದೇಶದ ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ನಮ್ಮೆಲ್ಲರ ಹಕ್ಕು, 18 ವರ್ಷ ತುಂಬಿದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಉತ್ತಮ ಜನ ಪ್ರತಿನಿಧಿ ಆಯ್ಕೆಗೆ ಎಲ್ಲರೂ ಮುಂದಾಗಬೇಕು ಎಂದರು
ವಿಕಲಚೇತನರು, ವಯೋ ವೃದ್ಧರು ಸೇರಿದಂತೆ ಇತರರ ಅನುಕೂಲಕ್ಕಾಗಿ ಚುನಾವಣಾ ಆಯೋಗ ಮಾಡಿರುವ ವ್ಯವಸ್ಥೆಗಳ ಸದುಪಯೋಗ ಪಡಿಸಿಕೊಂಡು ಮೆ.10 ರಂದು ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾರು ತಪ್ಪದೇ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ಶೇಕಡಾ 60 ಕ್ಕಿಂತ ಕಡಿಮೆ ಮತದಾನ ಮಾಡಿರುವ ಮತಗಟ್ಟೆಗಳಲ್ಲಿ ಈ ಬಾರಿ ಶೇಕಡಾ 100 ರಷ್ಟು ಮತದಾನ ಮಾಡಿಸುವುದು ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತದ ಉದ್ದೇಶವಾಗಿದೆ, ಈ ನಿಟ್ಟಿನಲ್ಲಿ ಹಾಸನ ಜಿಲ್ಲೆಯ ಮರದಾರರು ತಮ್ಮ ಹಕ್ಕನ ಚಲಾಯಿಸುವ ಮೂಲಕ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕುವ ಕೆಲಸ ಆಗಬೇಕಿದೆ ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಈ. ಕೃಷ್ಣೇಗೌಡ ಮಾತನಾಡಿ, ಅಭ್ಯರ್ಥಿಗಳು ಕೊಡುವ ಯಾವುದೇ ಆಸೆ ಆಮಿಷ ಗಳಿಗೆ ಬಲಿಯಾಗದೆ, ಕಡ್ಡಾಯವಾಗಿ ಪಾರದರ್ಶಕವಾಗಿ ಮತದಾನ ಮಾಡಬೇಕು, ರಾಜ್ಯದಲ್ಲಿ ಹಾಸನ ಜಿಲ್ಲೆ ಹೆಚ್ಚು ಮತದಾನದ ಮೂಲಕ ಮಾದರಿ ಆಗಿಸುವ ನಿಟ್ಟಿನಲ್ಲಿ ಎಲ್ಲರೂ ತಮ್ಮ ಹಕ್ಕನ ಚಲಾಯಿಸಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಹರೀಶ್, ನೋಡಲ್ ಅಧಿಕಾರಿ ಪರಪ್ಪಸ್ವಮಿ, ರಾಯಬಾರಿ ಗ್ಯಾರಂಟಿ ರಾಮಣ್ಣ, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜಾಥಾದಲ್ಲಿ ನೂರಾರು ಸಂಖ್ಯೆಯಲ್ಲಿ ಬೈಕ್ ಸವಾರರು ಭಾಗವಹಿಸಿ, ಆರ್.ಸಿ ರಸ್ತೆ, ಬಿ.ಎಂ ರಸ್ತೆ, ಡೈರಿ ವೃತ್ತ, ರಿಂಗ್ ರಸ್ತೆ, ಸೇರಿದಂತೆ ವಿವಿಧ ರಸ್ತೆಗಳಲ್ಲಿ ತೆರಳಿ ಎಲ್ಲಾರೂ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net