ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ

02-GPT-2
Published on

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮಗುವಿನ ಹಳ್ಳಿ, ಕಾರೇಮಾಳ, ಆಡಿನಕಣಿವೆ ಹಾಗೂ ಗುಡ್ಡೇಕೆರೆ ಜೇನುಕುರುಬ ಕಾಲನಿಗಳಿಗೆ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಗುರುವಾರ ಭೇಟಿ ನೀಡಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಜಾಗೃತಿ ಮೂಡಿಸಿದರು.
ಮತದಾನದಂತಹ ಮಹತ್ವದ ಕಾರ್ಯದಲ್ಲಿ ಯಾರೂ ಹೊರಗುಳಿಯಬಾರದು. ಪ್ರತಿಯೊಬ್ಬರೂ ಮತದಾನ ಮಾಡಬೇಕು.18 ವರ್ಷ ತುಂಬಿದ ಯುವಜನರು ತಪ್ಪದೇ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಬೇಕು. ಪ್ರಜಾಪ್ರಭುತ್ವ ಬಲಪಡಿಸುವ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹೇಳಿದರು. ಬಳಿಕ ಬಂಡಿಪುರದ ಬುಡಕಟ್ಟು ಆಶ್ರಮ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವ್ಯಾಸಂಗ, ಆಶ್ರಮ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸಮಾಲೋಚಿಸಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ತಹಸೀಲ್ದಾರ್ ರವಿಶಂಕರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನಂಜುಂಡೇಗೌಡ, ತಾಲೂಕು ಗಿರಿಜನ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷೆ ಪುಟ್ಟಮ್ಮ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net