ಮತದಾರರ ಪಟ್ಟಿಯಲ್ಲಿ ಹೆಸರಿದೆಯೇ? ಚೆಕ್ ಮಾಡಿಕೊಳ್ಳಿ; ಭದ್ರಾವತಿ ಕ್ಷೇತ್ರದಲ್ಲಿ 40 ಸಾವಿರ ಹೆಸರು ಹೊರಕ್ಕೆ: ಶಾಸಕ ಬಿ.ಕೆ.ಸಂಗಮೇಶ್ವರ್

BDVT WEEEB
Published on

ಭದ್ರಾವತಿ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೆ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಿ. 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ನಿಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಿ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಮನವಿ ಮಾಡಿದ್ದಾರೆ.

ಕ್ಷೇತ್ರದಲ್ಲಿ ಅಂದಾಜು 40 ಸಾವಿರ ಮತದಾರರ ಹೆಸರು ಪಟ್ಟಿಯಿಂದ ತೆಗೆಯಲಾಗಿದ್ದು ಬಿಟ್ಟು ಹೋಗಿರುವ ಹೆಸರನ್ನು ಸೇರಿಸುವ ಕೆಲಸ ಆಗಬೇಕಿದೆ. ಅಲ್ಲದೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸುವ ಕೆಲಸಕ್ಕೆ ಪಕ್ಷದ ಮುಖಂಡರು ಕಾರ್ಯಕರ್ತರು ಸಹಕರಿಸಬೇಕು ಎಂದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ನ.28 ರಂದು ಕೈಗೊಳ್ಳಲಾಗಿರುವ ಹೋರಾಟದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತಿತರರು ಆಗಮಿಸುತ್ತಿದ್ದು ಹೋರಾಟದ ಅಂಗವಾಗಿ ಪೂರ್ವಭಾವಿಯಾಗಿ ನ.22 ರಂದು ಬೆಳಗ್ಗೆ 12 ಗಂಟೆಗೆ ಸಹೋದರ ಶಿವಕುಮಾರ್ ಅವರ ನಿವಾಸದ ಆವರಣದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಸರ್ಕಾರದಿಂದ ತಾರತಮ್ಯ ನೀತಿ: ಪ್ರಸ್ತುತ ಬಿಜೆಪಿ ಸರ್ಕಾರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಅನುದಾನ ನೀಡದೆ ತಾರತಮ್ಯ ಮಾಡುತ್ತಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಆರೋಪಿಸಿದರು. ಜಿಲ್ಲೆಯಲ್ಲಿ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುತ್ತಿದೆ. ಆದರೆ ಭದ್ರಾವತಿ ಕ್ಷೇತ್ರಕ್ಕೆ ಅನುದಾನ ನೀಡುತ್ತಿಲ್ಲ. ಹೀಗಾಗಿ ಕೆೆಲವು ಯೋಜನೆಗಳು ಆರಂಭವಾಗಿ ಅರ್ಧಕ್ಕೆ ನಿಂತಿದ್ದರೆ, ಕೆಲವು ಇನ್ನೂ ಆರಂಭವೇ ಆಗಿಲ್ಲ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net