ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ

WhatsApp Image 2023-10-20 at 19.18.18
Published on

ಯಾದಗಿರಿ: ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದ್ದು, ನ.06ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ತಿಳಿಸಿದ್ದಾರೆ.
ನಮೂನೆ 18ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು.ಅರ್ಹತಾ ದಿನಾಂಕ 01.11.2023 ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ 01.11.2020 ಕ್ಕಿಂತಲು ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಧರರಾಗಿರಬೇಕು. ಈ ಕುರಿತು ಅಂಗೀಕೃತ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳ ಅಧಿಸೂಚನೆಯನ್ನು ಯುಜಿಸಿ ರವರು ದಿನಾಂಕ 21.07.2015 ರಂದು ಭಾರತ ರಾಜ್ಯಪತ್ರದಲ್ಲಿ ಅಧಿಸೂಚಿಸಲ್ಪಟ್ಟಿದ್ದು, ಅದರಲ್ಲಿನ ಪದವಿ ಹಾಗೂ ವಿಶ್ವವಿದ್ಯಾಲಯಗಳನ್ನು ಈ ಪದವೀಧರ ಕ್ಷೇತ್ರದ ನೋಂದಣಿಗಾಗಿ ಅಳವಡಿಸಿಕೊಳ್ಳುವುದು.

ದಿನಾಂಕ 01.11.2020 ಕ್ಕಿಂತಲೂ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿದ ನಮೂನೆ 18 ರಲ್ಲಿ ಭಾವ ಚಿತ್ರದೊಂದಿಗೆ ಭರ್ತಿ ಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿ, ಆಧಾರ, ಚುನಾವಣಾ ಗುರುತಿನ ಚೀಟಿ, ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳಲ್ಲೊಂದು ಸ್ವಯಂಧೃಡೀಕರಿಸಿ ಹಾಗೂ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅಜರ್ಿ ಸಲ್ಲಿಸಬಹುದು.

ಸೇವೆಯಲ್ಲಿರುವ ಸರಕಾರಿ ನೌಕರರು ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ ತಮ್ಮ ಅಧೀನದಲ್ಲಿ ಬರುವವರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಆಯೋಗವು ನಿಗದಿಪಡಿಸಿರುವ 3ನೇ ಅನುಸೂಚಿತ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಬೇಕು. ಪ್ರಮಾಣ ಪತ್ರದೊಡನೆ ಕ್ಲೇಮೆಂಟುದಾರನು ತಾನು ಓದಿದ ಕಾಲೇಜಿನ ಪ್ರಾಂಶುಪಾಲರು ಅಥವಾ ಸಂಬಂಧಪಟ್ಟ ವಿವಿಯ ರಿಜಿಸ್ಟಾರಗಳಿಂದ ಪ್ರಮಾಣ ಪತ್ರ ಪಡೆದು ಅಜರ್ಿ ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net