

ಬೆಟ್ಟದಪುರ: ತಾಲೂಕಿನಲ್ಲಿ ಪ್ರಮುಖವಾಗಿ ಅಗತ್ಯವಿರುವ ಮೂಲ ಸೌಕರ್ಯಗಳ ಕೊರತೆ ಸಮಸ್ಯೆ ಬಗೆಹರಿಸಿದ ತೃಪ್ತಿ ನನಗಿದೆ ಎಂದು ಶಾಸಕ ಕೆ.ಮಹದೇವ್ ಹೇಳಿದರು.
ಸಮೀಪದ ಕಿತ್ತೂರು ಮೂಡಲಕೊಪ್ಪಲು ಗ್ರಾಮದಲ್ಲಿ ಶುಕ್ರವಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಬಳಿಕ ಮಾತನಾಡಿದ ಅವರು, ಮತದಾರರು ನನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಧಕ್ಕೆ ಬರದ ಹಾಗೆ ಅವರ ಸಮಸ್ಯೆಗಳನ್ನುಆದ್ಯತೆಗೆ ಅನುಗುಣವಾಗಿ ಹಂತ ಹಂತವಾಗಿ ಬಗೆಹರಿಸಲು ಶ್ರಮಿಸಿದ್ದೇನೆ. ವಿರೋಧ ಪಕ್ಷದ ಶಾಸಕನಾಗಿದ್ದರೂ ಸಚಿವರು ಹಾಗೂ ಅಧಿಕಾರಿಗಳ ಬಳಿ ತಾಲೂಕಿನ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಅನುದಾನ ಮಂಜೂರು ಮಾಡಿಸಿಕೊಂಡು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದೇನೆ ಎಂದರು.
ಗ್ರಾಮಾಂತರ ಪ್ರದೇಶಗಳ ಸಾರ್ವಜನಿಕರ ನೆಮ್ಮದಿಯ ಜೀವನಕ್ಕೆ ಅವಶ್ಯಕತೆ ಇರುವ ರಸ್ತೆ ಚರಂಡಿ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಿದ ತೃಪ್ತಿಯಿದೆ. ಮತದಾರರು ನನ್ನ ಅವಧಿಯ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಮುಂಬರುವ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.
ಗ್ರಾ.ಪಂ.ಸದಸ್ಯ ದಿನೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸತೀಶ್, ಮುಖಂಡರಾದ ಗಗನ್, ಜಿ.ಸಿ. ಮಹದೇವಶೆಟ್ಟಿ, ಅಶ್ವತ್ಥ್, ಮಿಲ್ಟ್ರಿ ಸೋಮಣ್ಣ, ಜಗದೀಶ್, ವೆಂಕಟೇಶ್, ಹರೀಶ್, ಕಿತ್ತೂರು ಹಾರಂಗಿ ಪುನರ್ವಸತಿ ಉಪ ವಿಭಾಗ ಎಇಇ ರಂಗಯ್ಯ, ಎಇ ಮಂಜುನಾಥ್, ಬೆಟ್ಟದಪುರ ಹಾರಂಗಿ ಪುನರ್ವಸತಿ ಉಪ ವಿಭಾಗ ಎಇಇ ಲೋಹಿತ್, ಎಇ ಸುಧೀಂದ್ರ ಸೇರಿದಂತೆ ಮತ್ತಿತರರಿದ್ದರು.