ಮೈಸೂರು: ನಗರದ ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಸಾವಿರಕ್ಕೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಹೊರಗಿಟ್ಟು ಫೆ.16ರಂದು ಚುನಾವಣೆ ನಡೆಸಲಾಗುತ್ತಿದೆ ಸದಸ್ಯ ಟಿ.ಗೋಪಾಲ್ ದೂರಿದರು.
ಸಂಘದಲ್ಲಿ ಸುಮಾರು 10 ಸಾವಿರ ಸದಸ್ಯರಿದ್ದರೂ ಸಾವಿರಕ್ಕೂ ಹೆಚ್ಚು ಮಂದಿಯನ್ನು ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಲಿಲ್ಲ ಎಂದು ಕಾರಣ ನೀಡಿ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಆಡಳಿತ ಮಂಡಳಿ ಹಾಗೂ ಸಹಕಾರ ಇಲಾಖೆ ಸಮರ್ಪಕವಾಗಿ ಚುನಾವಣೆ ನಡೆಸುತ್ತಿಲ್ಲ ಎಂಬ ಅನುಮಾನ ಕಾಡಿದೆ. ಈ ಹಿಂದೆ ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡಿದ್ದರೂ ಸಹಾ ಗೈರು ಹಾಜರಿ ತೋರಿಸಿ, ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಹೀಗಾಗಿ ಚುನಾವಣೆ ಮುಂದೂಡಿ, ಅಕ್ರಮ ಸರಿ ಪಡಿಸಿದ ನಂತರವಷ್ಟೇ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು.
ಸದಸ್ಯರಾದ ವಿಜಯಕುಮಾರ್, ರಾಘವೇಂದ್ರ, ಸುಭಾಷ್ ಇತರರು ಇದ್ದರು.