ಮತ್ತಿಖಂಡ ಗ್ರಾಮಸ್ಥನಲ್ಲಿ ಕೆಎಫ್‌ಡಿ ಸೋಂಕು ಪತ್ತೆ

bhr kfd
ಬಾಳೆಹೊನ್ನೂರು ಸಮೀಪದ ಮತ್ತಿಖಂಡ ಗ್ರಾಮದಲ್ಲಿ ಕೆಎಫ್‌ಡಿ ಸೋಂಕಿನ ಕುರಿತು ಆರೋಗ್ಯ ಇಲಾಖೆ ಸಿಬ್ಬಂದಿ ಜನರಿಗೆ ಜಾಗೃತಿ ಮೂಡಿಸಿದರು.
Published on

ಬಾಳೆಹೊನ್ನೂರು: ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿ ದೇವದಾನ ಗ್ರಾಮ ಪಂಚಾಯಿತಿ ಮತ್ತಿಖಂಡ ಗ್ರಾಮದ ಸತೀಶ್ (32) ಅವರಿಗೆ ಕೆಎಫ್‌ಡಿ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಸತೀಶ್ ತೋಟಗಳಲ್ಲಿ ಮರಗಸಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಜ್ವರದಿಂದ ಬಳಲುತ್ತಿದ್ದರು. ಜೇನುಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಗಾಗಿದ್ದು, ಸೋಮವಾರ ರಕ್ತ ಪರೀಕ್ಷೆಗೆ ಒಳಪಡಿಸಿದಾಗ ಕೆಎಫ್‌ಡಿ ಸೋಂಕು ತಗುಲಿರುವುದು ದೃಢಪಟ್ಟಿದೆ. ತೋಟಕ್ಕೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಮಂಗನಿಗೆ ಕಚ್ಚಿರುವ ಉಣಗು (ಉಣ್ಣೆ) ಇವರಿಗೆ ಕಚ್ಚಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸತೀಶ್ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಎಫ್‌ಡಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತಿಖಂಡ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಮನೆಗಳಿಗೆ ತೆರಳಿ ಡಿಎಂಪಿ ತೈಲ, ಮನೆ ಸುತ್ತಲಿನ ಪ್ರದೇಶದಲ್ಲಿ ಸಿಂಪಡಿಸಲು ಔಷಧದ ಪುಡಿ ವಿತರಿಸಿದ್ದಾರೆ. ಮಂಗನ ಕಾಯಿಲೆ ಸೋಂಕಿನ ತಡೆಗೆ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net