ಮತ್ತೊಮ್ಮೆ ಎನ್.ಮಹೇಶ್ ಗೆಲ್ಲಿಸಿ

Published on

ಕೊಳ್ಳೇಗಾಲ: ಎನ್.ಮಹೇಶ್ ಅಭಿವೃದ್ಧಿ ರೂವಾರಿ. ಈ ದೃಷ್ಟಿಯಿಂದ ಕ್ಷೇತ್ರದ ಜನತೆ ಮತ್ತೊಮ್ಮೆ ಅವರನ್ನು ಆಯ್ಕೆ ಮಾಡಬೇಕೆಂದು ಶಾಸಕ ಎಸ್.ಎ.ರಾಮದಾಸ್ ಮನವಿ ಮಾಡಿದರು.


ಹಿಂದೆ ಅಧಿಕಾರ ನಡೆಸಿದ್ದ ಕಾಂಗ್ರೆಸ್ ರಾಜ್ಯಕ್ಕೆ ಅಭಿವೃದ್ಧಿ ನೀಡಲಿಲ್ಲ. ಭಾರತೀಯ ಜನತಾ ಪಕ್ಷ ಬಂದ ಮೇಲೆ ಸಾಕಷ್ಟು ಅಭಿವೃದ್ಧಿಯಾಗಿದೆ. ಜನಪರವಾದ ಯೋಜನೆಗಳನ್ನು ರೂಪಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಎನ್.ಮಹೇಶ್ ಅವರನ್ನು ಕ್ಷೇತ್ರದಿಂದ ಆರಿಸಿ ವಿಧಾನಸಭೆಗೆ ಕಳುಹಿಸಿ ಎಂದು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ಜಾರಿ ಮಾಡಿರುವ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತೇವೆ. ಜನರು ಈ ಬಾರಿಯೂ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲು ಬಹುಮತ ನೀಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ದಾಂತದಲ್ಲಿ ಜನಸೇವೆ ಮಾಡುತ್ತಿರುವ ಹಾಗೂ ಕ್ಷೇತ್ರದ ಅಭಿವೃದ್ಧಿ ಕೈಗೊಂಡಿರುವ ಅಭ್ಯರ್ಥಿ ಮಹೇಶ್ ಅವರನ್ನು ಗೆಲ್ಲಿಸಿ. ಡಬಲ್ ಇಂಜಿನ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಸದೃಢ ದೇಶ ನಿರ್ಮಾಣಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕಿದೆ ಎಂದರು.


ಬಿಜೆಪಿ ನಗರ ಮಂಡಲ ಅಧ್ಯಕ್ಷ ರಮೇಶ್ ಮುರಾರಿ, ಪ್ರಧಾನ ಕಾರ್ಯದರ್ಶಿ ಬೂದಿತಿಟ್ಟು ಶಿವಕುಮಾರ್, ಬಿಜೆಪಿ ಜಿಲ್ಲಾ ವಕ್ತಾರ ಬಸವರಾಜಪ್ಪ, ನಗರಸಭೆ ಸದಸ್ಯ ಚಿಂತು ಪರಮೇಶ್, ಕವಿತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net