ಮದುವೆ ಮಟಪದಲ್ಲಿ ಮತದಾನ ಜಾಗೃತಿ ಅಭಿಯಾನ

ಮದುವೆ ಮಟಪದಲ್ಲಿ ಮತದಾನ ಜಾಗೃತಿ ಅಭಿಯಾನ
Published on


ಹಾಸನ : ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪಕ್ಕೆ ಹಾಸನ ತಾಲೂಕು ಪಂಚಾಯಿತಿ ಸ್ವೀಪ್ ಸಮಿತಿ ಹಾಗೂ ಹಾಸನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಅವರು ಭೇಟಿ ನೀಡಿ ಕಡ್ಡಾಯ ಮತದಾನ ಮಾಡುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆಯುತ್ತಿರುವ ಮದುವೆಯ ಸಮಾರಂಭಕ್ಕೆ ಭೇಟಿ ನೀಡಿದ ಹಾಸನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ತಂಡ ನವ ಜೋಡಿಗಳಲ್ಲಿ ಹಾಗೂ ಮದುವೆಯಲ್ಲಿ ಭಾಗವಹಿಸಿರುವ ಸಾರ್ವಜನಿಕರಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸುವುದರ ಮೂಲಕ ಮತದಾನ ಮೌಲ್ಯದ ಬಗ್ಗೆ ತಿಳಿಸಿದರು.
ಇದೇ ವೇಳೆ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಹರೀಶ್, ಹಾಸನ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಿ.ಬಿ.ದಿನೇಶ್, ಹಾಸನ ತಾಲೂಕು ಮಟ್ಟದ ಸ್ವೀಪ್ ಸಮಿತಿ ತಂಡದವರು ಹಾಗೂ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net