ಮದ್ದಾನೇಶ್ವರ ಪಬ್ಲಿಕ್ ಸ್ಕೂಲ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

01-MAY-GPT-5
Published on

ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿ ಮದ್ದಾನೇಶ್ವರ ಪಬ್ಲಿಕ್ ಸ್ಕೂಲ್ ನಿರ್ಮಾಣ ಕಾಮಗಾರಿಗೆ ಗುರುವಾರ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹಾಗೂ ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಭೂಮಿಪೂಜೆ ನೆರವೇರಿಸಿದರು.

ಸಂಸ್ಥೆಯ ಕಾರ್ಯದರ್ಶಿ ಎಂ.ಸಿ.ಸ್ವಾಮಿ ಮಾತನಾಡಿ, ಮದ್ದಾನೇಶ್ವರ ವಿದ್ಯಾಸಂಸ್ಥೆಯು ಕಳೆದ 7 ವರ್ಷಗಳಿಂದ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕೆ ಪಟ್ಟಣದಲ್ಲಿ ಪಬ್ಲಿಕ್ ಸ್ಕೂಲ್ ನಡೆಸುತ್ತಿದೆ. ನೂತನ ಕಟ್ಟಡದಲ್ಲಿ ಸುಸಜ್ಜಿತ ಶಾಲೆ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಡಗೂರು ಅಡವಿ ಮಠದ ಶ್ರೀ ಶಿವಲಿಂಗೇಂದ್ರ ಸ್ವಾಮೀಜಿ, ಮೂಡಗೂರು ಮಠದ ಶ್ರೀ ಇಮ್ಮಡಿ ಉದ್ದಾನೇಶ್ವರ ಸ್ವಾಮೀಜಿ, ಕಬ್ಬಹಳ್ಳಿ ಮಠದ ಸ್ವಾಮೀಜಿ, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಎಂ.ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net