ಮದ್ದೂರು: ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಲ್ಲಿ ಸೋಮವಾರ ಮಧ್ಯಾಹ್ನ ಬಿರುಸಿನ ಮಳೆ ಬಂದು ತಂಪೆರೆಯಿತು. ಮಳೆ ಬಂದ ಕಾರಣ ಶಾಲೆಯ ಮಕ್ಕಳು ಮನೆಗೆ ಹೋಗಲು ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮಳೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಳೆ ರೈತರಿಗೆ ಖುಷಿಯನ್ನು ತಂದಿತು. ಮಳೆಯಿಂದ ಯಾವುದೇ ಅವಘಡ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.