ಮದ್ದೂರಿನಲ್ಲಿ ಮ್ಯಾರಾಥಾನ್

07M.D.R.3
ಮ್ಯಾರಾಥಾನ್‌ನಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಡಾ.ಜೆ.ನಂದೀಶ್, ವಿಂದ್ಯಾಬೋಪಣ್ಣ, ಡಾ.ಧನಂಜಯ, ಕಾರ್ತಿಕ್ ಇದ್ದರು.
Published on

ಮದ್ದೂರು: ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದಢೃರಾಗಬಹುದು ಎಂದು ಐಶ್ವರ್ಯ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ಕಾರ್ಯದರ್ಶಿ ಡಾ.ಜೆ.ನಂದೀಶ್ ತಿಳಿಸಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮ್ಯಾರಾಥಾನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಕ್ರೀಡಾಸ್ಫೂರ್ತಿ ಮೆರೆಯಬೇಕು ಎಂದು ತಿಳಿಸಿದರು.

ಪ್ರತಿನಿತ್ಯ ಯೋಗ, ಧ್ಯಾನ, ವ್ಯಾಯಾಮ ಹಾಗೂ ಪ್ರಾಣಾಯಾಮಗಳನ್ನು ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಮತ್ತು ಉತ್ತಮ ಆರೋಗ್ಯ ನಮ್ಮದಾಗುತ್ತದೆ ಎಂದರು.

ಮ್ಯಾರಾಥಾನ್‌ನಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಸಂಭ್ರಮದಿಂದ ಓಡುವ ಮೂಲಕ ಕ್ರೀಡಾಸ್ಫೂರ್ತಿ ಮೆರೆದರು. ಎಂಟು ವಿಭಾಗಗಳನ್ನು ಮಾಡಲಾಗಿತ್ತು, ಅದರಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪಾಲಕರು ಭಾಗವಹಿಸುವ ಮೂಲಕ ಗಮನ ಸೆಳೆದರು. ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಪ್ರಾಂಶುಪಾಲೆ ವಿಂದ್ಯಾ ಬೋಪಣ,್ಣ ಜಯನಗರ ಜಾಗ್ವಾರ್ ತಂಡದ ಡಾ.ಧನಂಜಯ, ಕಾರ್ತಿಕ್ ಸೇರಿದಂತೆ ವಿದ್ಯಾರ್ಥಿಗಳು, ಪಾಲಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net