ಮದ್ದೂರಿನಲ್ಲಿ ರಂಜಾನ್ ಆಚರಣೆ

22M.D.R.1
Published on

ಮದ್ದೂರು: ತಾಲೂಕಿನಾದ್ಯಂತ ಮುಸ್ಲಿಮರು ರಂಜಾನ್ ಹಬ್ಬವನ್ನು ಶನಿವಾರ ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಹೊಳೆ ಬೀದಿಯಲ್ಲಿರುವ ಮಸೀದಿಯಿಂದ ನೂರಾರು ಜನರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು. ಬಳಿಕ ಮಳವಳ್ಳಿ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಮಾಡಿದರು.


ಮಕ್ಕಳು, ಯುವಕರು, ವಯೋವೃದ್ಧರು ಹೊಸ ವಸ್ತ್ರಗಳನ್ನು ತೊಟ್ಟು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು. ಮದ್ದೂರು, ಬೆಸಗರಹಳ್ಳಿ, ಕೊಪ್ಪ ಸೇರಿದಂತೆ ವಿವಿಧ ಕಡೆಗಳಲ್ಲಿ ಹಬ್ಬದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net