ಮದ್ದೂರು ಚೆಕ್‌ಪೋಸ್ಟ್ ಬಳಿ ರೈತಸಂಘ ಪ್ರತಿಭಟನೆ

26-GPT-5
Published on

ಗುಂಡ್ಲುಪೇಟೆ: ಇತ್ತೀಚೆಗೆ ವಯನಾಡಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ನೀಡಿದ್ದ ಹೇಳಿಕೆ ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ವಾಸುದೇವ ಮೇಟಿ ಬಣದ ತಾಲೂಕು ಘಟಕ ಮಂಗಳವಾರ ಸುಲ್ತಾನ್‌ಬತ್ತೇರಿ ರಸ್ತೆಯ ಮದ್ದೂರು ಚೆಕ್‌ಪೋಸ್ಟ್ ಬಳಿ ಪ್ರತಿಭಟನೆ ನಡೆಸಿತು.

ಸಂಘಟನೆಯ ರಾಜ್ಯ ಉಪಾಧ್ಯಕ್ಷ ಡಾ.ಗುರುಪ್ರಸಾದ್ ಮಾತನಾಡಿ, ರಾತ್ರಿ ಸಂಚಾರಕ್ಕೆ ಅವಕಾಶ ನೀಡುವುದರಿಂದ ವನ್ಯಜೀವಿಗಳು ಮತ್ತು ಅರಣ್ಯಕ್ಕೆ ಅಪಾಯವಾಗಲಿದೆ. ಕಾಡಂಚಿನ ಗ್ರಾಮಗಳಲ್ಲಿ ಮಾನವ ವನ್ಯಜೀವಿ ಸಂಘರ್ಷ ಹೆಚ್ಚಲಿದೆ. ಅಕ್ರಮ ಸಾಗಣೆ ಹೆಚ್ಚುವ ಜತೆಗೆ ಕಳ್ಳ ಸಾಗಣೆಗೆ ಅವಕಾಶ ನೀಡಿದಂತಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ ಮನವಿ ಪತ್ರವನ್ನು ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಅವರಿಗೆ ನೀಡಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ಮಹೇಶ್, ಲೋಕೇಶ್, ಸಂಪತ್ತು, ಮುರಳಿ, ಸುರೇಶ್ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net