ಮದ್ಯ ಅಕ್ರಮ ಮಾರಾಟ ತಡೆಯಿರಿ

IMG-20230308-WA0285
ಮದ್ಯ ಅಕ್ರಮ ಮಾರಾಟ ನಿಷೇಧಕ್ಕೆ ಆಗ್ರಹಿಸಿ ಮರಸು ಗ್ರಾಮದ ಮಹಿಳೆಯರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಶೋಕ್‌ಗೆ ಮನವಿ ಸಲ್ಲಿಸಿದರು.
Published on

ಆಲೂರು: ಮದ್ಯ ಅಕ್ರಮ ಮಾರಾಟ ನಿಷೇಧಕ್ಕೆ ಆಗ್ರಹಿಸಿ ಪಟ್ಟಣದ ಮರಸು ಗ್ರಾಮದ ಮಹಿಳೆಯರು ಬುಧವಾರ ಪ್ರತಿಭಟನೆ ನಡೆಸಿ, ಉಪ ತಹಸೀಲ್ದಾರ್ ಅಶೋಕ್‌ಗೆ ಮನವಿ ಸಲ್ಲಿಸಿದರು.

ಗ್ರಾಮದ ಚಿಲ್ಲರೆ ಅಂಗಡಿಗಳಲ್ಲಿ ನಿರಂತರವಾಗಿ ಮದ್ಯ ಅಕ್ರಮ ಮಾರಾಟ ನಡೆಯುತ್ತಿದ್ದು, ಯುವಕರು ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ದೂರಿದರು. ಪಟ್ಟಣ ಪಂಚಾಯಿತಿ ಸದಸ್ಯ ಧರ್ಮ ಮಾತನಾಡಿ, ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದು, ಅಶಾಂತಿ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಸಂಪೂರ್ಣ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ನಗರಂಗೆರೆ ಮಹೇಶ್, ಗ್ರಾಮಸ್ಥರಾದ ಚಂದ್ರು, ಬೇಬಿ, ಸುಶೀಲಮ್ಮ, ಶಾರದಾ, ಗೀತಾ, ಶಿವಮ್ಮ, ಕವಿತಾ, ಲಕ್ಷ್ಮೀ, ಪುಟ್ಟಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net