ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದವ ಬಂಧನ

Oplus_16908288
Oplus_16908288
Published on

ನಂಜನಗೂಡು: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಕವಲಂದೆ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ವೀರೇಗೌಡನಹುಂಡಿ ಗ್ರಾಮದಲ್ಲಿ ಇತ್ತೀಚೆಗೆ ಅಂಗಡಿಯಲ್ಲಿ ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಕವಲಂದೆ ಪೊಲೀಸ್ ಠಾಣೆ ಪಿಎಸ್‌ಐ ಬಸವರಾಜು ನೇತೃತ್ವದಲ್ಲಿ ದಾಳಿ ನಡೆಸಿ ಗ್ರಾಮದ ಮನು (28) ಎಂಬಾತನನ್ನು ವಶಕ್ಕೆ ಪಡೆದರು. ಈ ವೇಳೆ ಒಟ್ಟು ಸುಮಾರು 4,135 ರೂ. ಬೆಲೆಬಾಳುವ ಮದ್ಯವನ್ನು ಸಂಗ್ರಹಿಸಿಟ್ಟಿದ್ದ. ಕಾರ್ಯಾಚರಣೆಯಲ್ಲಿ ಕವಲಂದೆ ಪೊಲೀಸ್ ಠಾಣೆ ಪಿಎಸ್‌ಐ ಬಸವರಾಜು, ಎಎಸ್‌ಐ ಬಸವರಾಜು, ಸಿಬ್ಬಂದಿ ಎಸ್.ಬಿ.ರಮೇಶ್, ನಾಗೇಂದ್ರ, ರಾಜಶೇಖರ್, ಚೆಲುವರಾಜು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net