ಮದ್ಯ ಅಕ್ರಮ ಸಂಗ್ರಹಿಸಿದರೆ ಕ್ರಮ

01 kurugodu 07
filter: 0; fileterIntensity: 0.000000; filterMask: 0; captureOrientation: 0; hdrForward: 4; shaking: 0.015690; highlight: 1; algolist: 0; multi-frame: 1; brp_mask: 8; brp_del_th: 0.0003,0.0000; brp_del_sen: 0.1300,0.0000; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (200, 0);aec_lux: 218.76959;aec_lux_index: 0;albedo: ;confidence: ;motionLevel: 1;weatherinfo: null;temperature: 33;
Published on

ಕುರುಗೋಡು: ಮೊಹರಂ ಹಿನ್ನೆಲೆಯಲ್ಲಿ ಪುರಸಭೆ ನೆರವಿನೊಂದಿಗೆ ಸೂಕ್ಷ್ಮ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ದುರ್ವತನೆ ತೋರಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಿಪಿಐ ವಿಶ್ವನಾಥ್ ಹಿರೇಗೌಡರ್ ಎಚ್ಚರಿಸಿದರು.

ಪಟ್ಟಣದ ಠಾಣೆಯಲ್ಲಿ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಂಗಳವಾರ ಮಾತನಾಡಿದರು. ಠಾಣೆ ವ್ಯಾಪ್ತಿಯ 34 ಗ್ರಾಮಗಳಲ್ಲಿ ಹಬ್ಬ ಆಚರಣೆಗೆ ಅವಕಾಶ ನೀಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಬಾರದಂತೆ ಸೂಕ್ಷ್ಮ ಪ್ರದೇಶದಲ್ಲಿ ಸಭೆ ನಡೆಸುವ ಜತೆಗೆ ಗ್ರಾಮದ ಪ್ರಮುಖರಿಗೆ ಜವಾಬ್ದಾರಿ ನೀಡಲಾಗುವುದು. ಮದ್ಯದ ಅಕ್ರಮ ಮಾರಾಟ, ಸಂಗ್ರಹ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.

ತೋರಣಗಲ್ಲು ಡಿವೈಎಸ್ಪಿ ಪ್ರಸಾದ್ ಗೋಖಲೆ ಮಾತನಾಡಿ ಹಬ್ಬ ತ್ಯಾಗ, ಬಲಿದಾನದ ಸಂಕೇತವಾಗಿದ್ದು ಭಾವೈಕ್ಯದಿಂದ ಆಚರಣೆ ಮಾಡಲಾಗುತ್ತದೆ. ಆದರೆ ಕೆಲ ಕಿಡಿಗೇಡಿಗಳು ವೈಯಕ್ತಿಕ ಕಲಹದಿಂದ ಸಮುದಾಯದ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಾರೆ. ಅಂಥವರ ವಿರುದ್ಧ ತೀವ್ರ ನಿಗಾ ವಹಿಸಲಾಗುವುದು ಎಂದರು.

ಪಿಎಸ್‌ಐ ಸುಪ್ರೀತ್ ವಿರೂಪಾಕ್ಷಪ್ಪ ಮಾತನಾಡಿ, ಎಲ್ಲರೂ ಕೂಡಿ ಹಬ್ಬ ಆಚರಣೆ ಮಾಡಬೇಕು ಎಂದು ಸಲಹೆ ನೀಡಿದರು. ಪುರಸಭೆ ಅಧ್ಯಕ್ಷ ಶೇಖಣ್ಣ, ಉಪಾಧ್ಯಕ್ಷ ಮಲ್ಲಿಕಾರ್ಜುನ, ಪ್ರಮುಖರಾದ ಚಾನಾಳ್ ಚನ್ನಬಸವ, ನಾಗರಾಜ್, ಬಾಗ್ಲಿಮನೆ ಆನಂದ್, ಅಲ್ಲಾಸಾಬ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net